ಪುತ್ತೂರು : ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವದ ಪ್ರಯುಕ್ತ ದೇವಳದ ಗದ್ದೆ ಸ್ವಚ್ಚತಾ ಕಾರ್ಯವು ಎ.5 ರಂದು ಶ್ರೀಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮುಳಿಯ ಕೇಶವಪ್ರಸಾದ್ ಅವರ ನೇತೃದಲ್ಲಿ ವಿವಿಧ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ದೇವಳದ 14
ಎಕ್ರೆ ಸ್ಥಳದಲ್ಲಿ ನಡೆಯಿತು.
ಕಾರ್ಯಕ್ರಮದ ಉದ್ಘಾಟನೆಯನ್ನು ಜೀವಂಧರ ಜೈನ್, ಅಧ್ಯಕ್ಷರು ನಗರಸಭೆ ಪುತ್ತೂರು ಇವರು ನೆರವೇರಿಸಿದರು.