ಮಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ ಸ್ವಾಗತಕ್ಕೆ ಮಂಗಳೂರು ಸಜ್ಜುಗೊಂಡಿದ್ದು, ಸೆ. 2ರಂದು ನಡೆಯುವ ಪ್ರಧಾನಿಯವರ ಕಾರ್ಯಕ್ರಮಕ್ಕೆ ಸಿದ್ಧತೆ ಅಂತಿಮ ಹಂತಕ್ಕೆ ತಲುಪಿದ್ದು, ತಯಾರಿಗಳು ಯಾವ ರೀತಿಯಾಗಿ ನಡೆಯುತ್ತಿದೆ ಎಂದು ಸಂಸದರಾದ ನಳಿನ್ ಕುಮಾರ್ ಕಟೀಲ್ ರವರ ವೀಕ್ಷಣೆ ಮಾಡಿದರು.

ಸಿದ್ಧತೆಗಳ ಕುರಿತು ಸಂಸದ ನಳಿನ್ ಕುಮಾರ್ ಕಟೀಲು ಅವರು ಸಭೆ ನಡೆಸಿದರು. ಈ ಸಂದರ್ಭದಲ್ಲಿ ಗೋಲ್ಡ್ ಫಿಂಚ್ ನ ಪ್ರಕಾಶ್ ಶೆಟ್ಟಿ, ಜಗದೀಶ್ ಅಧಿಕಾರಿ, ಸೀತಾರಾಮ ರೈ ಕೆದಂಬಾಡಿಗುತ್ತು, ಕ್ಯಾಪ್ಟನ್ ಗಣೇಶ್ ಕಾರ್ಣಿಕ್, ಉದಯ್ ಕುಮಾರ್ ನಗ್ರಿ, ಸೇರಿದಂತೆ ಹಲವು ಮುಖಂಡರು ಉಪಸ್ಥಿತರಿದ್ದರು.

ಸೆ.2 ರಂದು ಮಧ್ಯಾಹ್ನ 1 ಗಂಟೆಗೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸುವ ಪ್ರಧಾನಿಯವರು ನವಮಂಗಳೂರು ಬಂದರಿಗೆ ತೆರಳಿ ವಿವಿಧ ಯೋಜನೆ ಗಳ ಉದ್ಘಾಟನೆ ಹಾಗೂ ಶಿಲಾನ್ಯಾಸ ನೆರವೇರಿಸಿ, ಬಳಿಕ ಗೋಲ್ಡ್ ಫಿಂಚ್ ಸಿಟಿ ಮೈದಾನಕ್ಕೆ ಆಗಮಿಸಿ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ.



























