Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ನಿರೂಪಣೆ ಮಾಡುತ್ತಿದ್ದ ವೇಳೆ ವೇದಿಕೆಯಲ್ಲಿ ಕುಸಿದು ಬಿದ್ದು ನಿರೂಪಕ ಮೃತ್ಯು..!!

    ನಿರೂಪಣೆ ಮಾಡುತ್ತಿದ್ದ ವೇಳೆ ವೇದಿಕೆಯಲ್ಲಿ ಕುಸಿದು ಬಿದ್ದು ನಿರೂಪಕ ಮೃತ್ಯು..!!

    ಇನೋವಾ ಕಾರು: ದ್ವಿಚಕ್ರ ವಾಹನ ಡಿಕ್ಕಿ: ಸವಾರ ಗಂಭೀರ..!!

    ಇನೋವಾ ಕಾರು: ದ್ವಿಚಕ್ರ ವಾಹನ ಡಿಕ್ಕಿ: ಸವಾರ ಗಂಭೀರ..!!

    ಹನುಮಗಿರಿ ಬ್ರಹ್ಮಕಲಶೋತ್ಸವ : ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ‌ರವರಿಂದ ಮುಖ ಗೋಪುರದ ಉದ್ಘಾಟನೆ..!!!

    ಹನುಮಗಿರಿ ಬ್ರಹ್ಮಕಲಶೋತ್ಸವ : ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ‌ರವರಿಂದ ಮುಖ ಗೋಪುರದ ಉದ್ಘಾಟನೆ..!!!

    ಜಲಪಾತದ ಬಳಿ ರೀಲ್ಸ್ ಮಾಡಲು ಹೋಗಿ ಮೂವರು ಸಾವು..!

    ಜಲಪಾತದ ಬಳಿ ರೀಲ್ಸ್ ಮಾಡಲು ಹೋಗಿ ಮೂವರು ಸಾವು..!

    ಮಂಗಳೂರು ಕೂಳೂರಿನಲ್ಲಿ ಬೈಕ್‌ಗೆ ಬಸ್‌ ಡಿಕ್ಕಿ ಬೆಟ್ಟಂಪಾಡಿ ಕಲೆಂಜಿಲದ ದೀಕ್ಷಿತ್ ಪೂಜಾರಿ ಸಾವು..!!

    ಮಂಗಳೂರು ಕೂಳೂರಿನಲ್ಲಿ ಬೈಕ್‌ಗೆ ಬಸ್‌ ಡಿಕ್ಕಿ ಬೆಟ್ಟಂಪಾಡಿ ಕಲೆಂಜಿಲದ ದೀಕ್ಷಿತ್ ಪೂಜಾರಿ ಸಾವು..!!

    ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

    ಪುತ್ತೂರು: ಎಂ ಡಿ ಎಮ್ ಎ ಮಾರಾಟ ಜಾಲದ ಆರೋಪಿಯ ಪತ್ನಿ ಸಹಿತ ಇಬ್ಬರ ಬಂಧನ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಸುಳ್ಯ

ಮುಕ್ಕೂರು: 13 ನೇ ವರ್ಷದ ಗಣೇಶೋತ್ಸವ ಕ್ರೀಡಾಕೂಟ ಹಾಗೂ ಸನ್ಮಾನ ಸಮಾರಂಭ: ರಾಷ್ಟ್ರ ಪ್ರೇಮ ಉದ್ದೀಪನದ ಹಬ್ಬ- ಸಚಿವ ಎಸ್. ಅಂಗಾರ

September 1, 2022
in ಸುಳ್ಯ
0
ಮುಕ್ಕೂರು: 13 ನೇ ವರ್ಷದ ಗಣೇಶೋತ್ಸವ ಕ್ರೀಡಾಕೂಟ ಹಾಗೂ ಸನ್ಮಾನ ಸಮಾರಂಭ: ರಾಷ್ಟ್ರ ಪ್ರೇಮ ಉದ್ದೀಪನದ ಹಬ್ಬ- ಸಚಿವ ಎಸ್. ಅಂಗಾರ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಸುಳ್ಯ: ಗಣೇಶೋತ್ಸವವು ರಾಷ್ಟ್ರಪ್ರೇಮವನ್ನು ಉದ್ದೀಪನಗೊಳಿಸುವ ಹಬ್ಬವಾಗಿದ್ದು, ಮುಕ್ಕೂರು ಪರಿಸರದಲ್ಲಿ ಕಳೆದ ಹದಿಮೂರು ವರ್ಷಗಳಿಂದ ಅರ್ಥಪೂರ್ಣ ರೀತಿಯಲ್ಲಿ ಆಚರಿಸಲಾಗುತ್ತಿರುವುದು ಶ್ಲಾಘನೀಯ ಸಂಗತಿ ಎಂದು ಮೀನುಗಾರಿಕೆ, ಬಂದರು ಹಾಗೂ ಒಳನಾಡು ಸಾರಿಗೆ ಸಚಿವ ಎಸ್. ಅಂಗಾರ ಹೇಳಿದರು.

Advertisement
Advertisement

ಮುಕ್ಕೂರು- ಕುಂಡಡ್ಕ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಆಶ್ರಯದಲ್ಲಿ ಮುಕ್ಕೂರು ಶಾಲಾ ವಠಾರದಲ್ಲಿ ಆ.31 ರಂದು 13 ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ ಕ್ರೀಡಾಕೂಟ, ಸನ್ಮಾನ ಸಮಾರಂಭದಲ್ಲಿ ಅವರು ಮಾತನಾಡಿದರು.

ದೇಶವನ್ನು ಒಗ್ಗೂಡಿಸುವ ನಿಟ್ಟಿನಲ್ಲಿ ಸಾರ್ವಜನಿಕವಾಗಿ ಗಣೇಶೋತ್ಸವ ಆಚರಿಸಲಾಯಿತು. ಬ್ರಿಟಿಷರ ವಿರುದ್ಧದ ಹೋರಾಟವಾಗಿ, ಸನಾತನ ಸಂಸ್ಕೃತಿಯ ಮೇಲಿನ ಆಕ್ರಮಣವನ್ನು ತಡೆದು ದುಷ್ಟ ಶಕ್ತಿಗಳನ್ನು ತಡೆದು ನಿಲ್ಲುವ ಭಾಗವಾಗಿಯು ಗಣೇಶೋತ್ಸವ ದೇಶದಲ್ಲಿ ಮಹತ್ವದ ಪ್ರಭಾವ ಬೀರಿದೆ ಎಂದರು.

Advertisement

ಕೃಷಿ ಕ್ಷೇತ್ರದಲ್ಲಿ ಅಪೂರ್ವ ಸಾಧನೆಗೆಯ್ಯುತ್ತಿರುವ ಶ್ವೇತಾ ಕಾನಾವು ಅವರನ್ನು ಸನ್ಮಾನಿಸಿರುವುದು ಉತ್ತಮ ಕಾರ್ಯ. ಇಂತಹ ಗೌರವ ನೀಡಿರುವ ಗಣೇಶೋತ್ಸವ ಸಂಘವು ಅಭಿನಂದನೆಗೆ ಅರ್ಹವಾದದು ಎಂದ ಸಚಿವ ಅಂಗಾರ, ಆಧುನಿಕ ಕೃಷಿಯಲ್ಲಿ ತೊಡಗುವ ಪ್ರತಿಯೊಬ್ಬರಿಗೆ ಇವರ ಸಾಧನೆ ಸ್ಪೂರ್ತಿಯಾಗಲಿ ಎಂದರು.

ಸಮಾರಂಭ ಉದ್ಘಾಟಿಸಿದ ವನಶ್ರೀ ಗಣಪಯ್ಯ ಭಟ್ ಮಾತನಾಡಿ, ಹಿಂದೂ ಸಂಸ್ಕೃತಿಯ ಹಲವು ಆಚರಣೆಗಳಲ್ಲಿ ಗಣೇಶೋತ್ಸವವು ಒಂದು. ಮುಕ್ಕೂರಿನಂತಹ ಗ್ರಾಮ್ಯ ಪ್ರದೇಶದಲ್ಲಿ ಕಳೆದ ಹದಿಮೂರು ವರ್ಷಗಳಿಂದ ಧಾರ್ಮಿಕ, ಸಾಮಾಜಿಕ ನೆಲೆಯಲ್ಲಿ ಗಣೇಶನ ಸ್ಮರಣೆ ಮಾಡುತ್ತಿರುವುದು ಶ್ಲಾಘನೀಯ ಸಂಗತಿ ಎಂದ ಅವರು ಗಣೇಶೋತ್ಸವದ ಆಚರಣೆಯ ಮಹತ್ವದ ಬಗ್ಗೆ ವಿವರಿಸಿದರು.

ಸಭಾಧ್ಯಕ್ಷತೆ ವಹಿಸಿದ್ದ ಮುಕ್ಕೂರು ಸಾರ್ವಜನಿಕ ಗಣೇಶೋತ್ಸವ ಸಮಿತಿ ಗೌರವಾಧ್ಯಕ್ಷ ಹಾಗೂ ಪೆರುವಾಜೆ ಗ್ರಾಮ ಪಂಚಾಯತ್ ಅಧ್ಯಕ್ಷ ಜಗನ್ನಾಥ ಪೂಜಾರಿ ಮುಕ್ಕೂರು ಮಾತನಾಡಿ, ಸಮಾಜದಲ್ಲಿ ಮುಕ್ಕೂರಿನ ಗಣೇಶೋತ್ಸವ ಸಾಮರಸ್ಯ, ಸೌರ್ಹಾದತೆಯನ್ನು ಉಳಿಸುವ ಜತೆಗೆ ಸಮಾಜಮುಖಿ ಕಾರ್ಯಚಟುವಟಿಕೆಗಳನ್ನು ಅನುಷ್ಠಾನಿಸುತ್ತಿದೆ. ಇದಕ್ಕೆ ಊರಿನ ಪ್ರತಿಯೋರ್ವರ ಕೊಡುಗೆ, ಪ್ರೋತ್ಸಾಹ ಕಾರಣವಾಗಿದ್ದು ಇಂದಿನ ಕಾರ್ಯಕ್ರಮದ ಅಭೂತಪೂರ್ವ ಯಶಸ್ಸು ಈ ಊರಿಗೆ ಸಲ್ಲುತ್ತದೆ ಎಂದರು.

ಮುಕ್ಕೂರು ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಕುಂಬ್ರ ದಯಾಕರ ಆಳ್ವ ಮಾತನಾಡಿ, ಗಣೇಶೋತ್ಸವದ ಜತೆಗೆ ಬೇರೆ ಬೇರೆ ಕ್ಷೇತ್ರದ ಸಾಧಕರನ್ನು ಗುರುತಿಸುವ ಕೆಲಸ ಇಲ್ಲಿ ನಡೆದಿದೆ. ಇಂತಹ ಅರ್ಥಪೂರ್ಣ ಚಟುವಟಿಕೆಗಳನ್ನು ನಾವೆಲ್ಲರೂ ಬೆಂಬಲಿಸಿ ಪ್ರೋತ್ಸಾಹಿಸಬೇಕು ಎಂದರು.

ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಾಲಯದ ವ್ಯವಸ್ಥಾಪನಾ ಸಮಿತಿ ಮಾಜಿ‌ ಅಧ್ಯಕ್ಷ ಉಮೇಶ್ ಕೆಎಂಬಿ ಮಾತನಾಡಿ, ಹಿಂದೂ ಸಮಾಜದಲ್ಲಿ ಹತ್ತಾರು ಹಬ್ಬ ಹರಿದಿನಗಳು ಇವೆ. ಗಣೇಶೋತ್ಸವವು ಕೂಡ ದೇಶದ ಒಗ್ಗಟಿನ ಹೋರಾಟದ ಜತೆಗೆ ಧಾರ್ಮಿಕವಾಗಿಯು ಮನ್ನಣೆ ಪಡೆದಿದ್ದು ಮುಕ್ಕೂರಿನಲ್ಲಿ ಯಶಸ್ವಿಯಾಗಿ ಅನುಷ್ಟಾನಗೊಳ್ಳುತ್ತಿದೆ ಎಂದರು.

ಕೃಷಿ ಸಾಧಕಿಗೆ ಸನ್ಮಾನ:

ಈ ಸಂದರ್ಭದಲ್ಲಿ ಜಿಲ್ಲಾ ಕೃಷಿ ಪ್ರಶಸ್ತಿ ಪುರಸ್ಕೃತೆ ಶ್ವೇತಾ ಕಾನಾವು ಅವರನ್ನು ಸಚಿವ ಎಸ್ ಅಂಗಾರ ಅವರು ಸನ್ಮಾನಿಸಿದರು. ಶಿಕ್ಷಕ ಲಿಂಗಪ್ಪ ಬೆಳ್ಳಾರೆ ಅವರು ಶ್ವೇತಾ ಕಾನಾವು ಅವರ ಸಾಧನೆಯ ಕುರಿತಂತೆ ಅಭಿನಂದನಾ ಮಾತುಗಳನ್ನಾಡಿದರು. ಅಪಾರ ಸಂಖ್ಯೆಯಲ್ಲಿ ನೆರೆದಿದ್ದ ಪ್ರೇಕ್ಷಕ ವರ್ಗ ಕರಾಡತನದ ಮೂಲಕ ಸಾಧನೆಗೆ ಅಭಿನಂದನೆ ಸಲ್ಲಿಸಿದರು.

ಸಚಿವ ಅಂಗಾರ ಅವರಿಗೆ ಗೌರವಾರ್ಪಣೆ:

ಮುಕ್ಕೂರು ವಾರ್ಡ್ ವ್ಯಾಪ್ತಿಯ ಕುಂಡಡ್ಕ- ಚೆನ್ನಾವರ ಸಂಪರ್ಕ ರಸ್ತೆ, ಕುಂಜಾಡಿ- ತೋಟದಮೂಲೆ ಸಂಪರ್ಕ ರಸ್ತೆ, ಚೆನ್ನಾವರ ಕಿಂಡಿ ಅಣೆಕಟ್ಟು ನಿರ್ಮಾಣಕ್ಕೆ ಒಟ್ಟು 90 ಲಕ್ಷ ರೂ. ಹಾಗೂ ಚೆನ್ನಾವರ ಕುಂಡಡ್ಕ ಸಂಪರ್ಕ ರಸ್ತೆ ವಿಸ್ತರಣೆ, ಹೊಸ ಸೇತುವೆ ನಿರ್ಮಾಣಕ್ಕೆ 4.5 ಕೋ. ರೂ. ಅನುದಾನ ಒದಗಿಸಿದ ಸಚಿವ ಎಸ್. ಅಂಗಾರ ಅವರನ್ನು ಊರವರ ಪರವಾಗಿ ಪೆರುವಾಜೆ ಗ್ರಾ.ಪಂ.ಅಧ್ಯಕ್ಷ ಜಗನ್ನಾಥ ಪೂಜಾರಿ ಮುಕ್ಕೂರು ಹಾಗೂ ಅತಿಥಿಗಳು ಸನ್ಮಾನಿಸಿ ಗೌರವಿಸಿದರು.

ವೇದಿಕೆಯಲ್ಲಿ ಮುಕ್ಕೂರು-ಕುಂಡಡ್ಕ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಅಧ್ಯಕ್ಷ ಜಯಂತ ಕುಂಡಡ್ಕ, ನೇಸರ ಯುವಕ ಮಂಡಲ ಅಧ್ಯಕ್ಷ ರಮೇಶ್ ಕಾನಾವು ಉಪಸ್ಥಿತರಿದ್ದರು. ಪುಣ್ಯಶ್ರೀ ಕುಂಡಡ್ಕ ಮತ್ತು ತಂಡ ಪ್ರಾರ್ಥಿಸಿದರು. ಕಾರ್ಯದರ್ಶಿ ಶಶಿಕುಮಾರ್ ಬಿ.ಎನ್.ಸ್ವಾಗತಿಸಿ, ವಂದಿಸಿದರು. ಶಿಕ್ಷಕಿ ರಕ್ಷಿತಾ ಅಡ್ಯತಕಂಡ ನಿರೂಪಿಸಿದರು.

ದೀಪ ಬೆಳಗಿಸಿ ಉದ್ಘಾಟನೆ:

ನ್ಯಾಯವಾದಿ ಗಣಪತಿ ಭಟ್ ನೀರ್ಕಜೆ ಅವರು ಶ್ರೀ ದೇವರಿಗೆ ದೀಪ ಬೆಳಗಿಸಿ ಕಾರ್ಯಕ್ರಮಕ್ಕೆ ವಿದ್ಯುಕ್ತ ಚಾಲನೆ ನೀಡಿ ಗಣೇಶೋತ್ಸವದ ಮಹತ್ವದ ಬಗ್ಹೆ ಶುಭ ಹಾರೈಸಿದರು. ಗ್ರಾ.ಪಂ.ಉಪಾಧ್ಯಕ್ಷೆ ಚಂದ್ರಾವತಿ ಇಟ್ರಾಡಿ, ಸದಸ್ಯೆ ಗುಲಾಬಿ ಬೊಮ್ಮೆಮಾರು ಉಪಸ್ಥಿತರಿದ್ದರು. ವಿದ್ಯಾರ್ಥಿಗಳಿಂದ ಭಜನಾ ಕಾರ್ಯಕ್ರಮ ನೆರವೇರಿತು. ಮಧ್ಯಾಹ್ನ ಸುಬ್ರಹ್ಮಣ್ಯ ದೇವಾಲಯದಿಂದ ನೀಡಿದ ಅನ್ನಪ್ರಸಾದ ವಿತರಿಸಲಾಯಿತು.

ವಿವಿಧ ಸ್ಪರ್ಧೆಗಳು:

ಇಡೀ ದಿನ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ, ಪ.ಪೂ.ಕಾಲೇಜು, ಪದವಿ ಕಾಲೇಜು ಹಾಗೂ ಸಾರ್ವಜನಿಕ ವಿಭಾಗದಲ್ಲಿ ವಿವಿಧ ಸ್ಪರ್ಧೆಗಳು ನಡೆಯಿತು. ನೂರಾರು ಮಂದಿ‌ ಪಾಲ್ಗೊಂಡರು. ಪೆರುವಾಜೆ ಗ್ರಾ.ಪಂ.ಸದಸ್ಯ ಸಚಿನ್ ರಾಜ್ ಶೆಟ್ಟಿ ಪೆರುವಾಜೆ ಸಹಿತ ಗಣ್ಯರು ಬಹುಮಾನ ವಿತರಿಸಿದರು. ರಕ್ಷಿತಾ ಕೊಡಂಗೆ ಬಹುಮಾನಿತರ ಪಟ್ಟಿ ವಾಚಿಸಿದರು.

Advertisement
Advertisement
Previous Post

ಪ್ರಧಾನಿ ಸ್ವಾಗತಕ್ಕೆ ಮಂಗಳೂರು ಸಜ್ಜು: ತಯಾರಿಗಳ ಬಗ್ಗೆ ವೀಕ್ಷಿಸಿದ ಸಂಸದ ನಳಿನ್ ಕುಮಾರ್ ಕಟೀಲ್

Next Post

ಎಲ್‌ಪಿಜಿ ಸಿಲಿಂಡರ್ ಗಳ ಬೆಲೆಯಲ್ಲಿ 91.50 ರೂ. ಇಳಿಕೆ..!!

OtherNews

ಇನೋವಾ ಕಾರು: ದ್ವಿಚಕ್ರ ವಾಹನ ಡಿಕ್ಕಿ: ಸವಾರ ಗಂಭೀರ..!!
ಸುಳ್ಯ

ಇನೋವಾ ಕಾರು: ದ್ವಿಚಕ್ರ ವಾಹನ ಡಿಕ್ಕಿ: ಸವಾರ ಗಂಭೀರ..!!

April 11, 2026
ಹನುಮಗಿರಿ ಬ್ರಹ್ಮಕಲಶೋತ್ಸವ : ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ‌ರವರಿಂದ ಮುಖ ಗೋಪುರದ ಉದ್ಘಾಟನೆ..!!!
ಸುಳ್ಯ

ಹನುಮಗಿರಿ ಬ್ರಹ್ಮಕಲಶೋತ್ಸವ : ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ‌ರವರಿಂದ ಮುಖ ಗೋಪುರದ ಉದ್ಘಾಟನೆ..!!!

April 11, 2026
ಜಲಪಾತದ ಬಳಿ ರೀಲ್ಸ್ ಮಾಡಲು ಹೋಗಿ ಮೂವರು ಸಾವು..!
ಸುಳ್ಯ

ಜಲಪಾತದ ಬಳಿ ರೀಲ್ಸ್ ಮಾಡಲು ಹೋಗಿ ಮೂವರು ಸಾವು..!

April 11, 2026
ಸುಳ್ಯದಲ್ಲಿ ಮಸೀದಿ ಕಾಣಿಕೆ ಡಬ್ಬಿ ಕಳವು ಪ್ರಕರಣ: ಆರೋಪಿಗೆ ಬಂಧನ, ನ್ಯಾಯಾಂಗ ಬಂಧನಕ್ಕೆ ರವಾನೆ..!!
ಕ್ರೈಮ್

ಸುಳ್ಯದಲ್ಲಿ ಮಸೀದಿ ಕಾಣಿಕೆ ಡಬ್ಬಿ ಕಳವು ಪ್ರಕರಣ: ಆರೋಪಿಗೆ ಬಂಧನ, ನ್ಯಾಯಾಂಗ ಬಂಧನಕ್ಕೆ ರವಾನೆ..!!

April 7, 2026
ಗೂನಡ್ಕ ಬದ್ರಿಯಾ ಜುಮ್ಮಾ ಮಸೀದಿಯಲ್ಲಿ ಹರಕೆ ಹುಂಡಿ ಕಳವು – ಸಿಸಿಟಿವಿಯಲ್ಲಿ ಸೆರೆಯಾದ ಕಳ್ಳನ ಕೃತ್ಯ..!!
Featured

ಗೂನಡ್ಕ ಬದ್ರಿಯಾ ಜುಮ್ಮಾ ಮಸೀದಿಯಲ್ಲಿ ಹರಕೆ ಹುಂಡಿ ಕಳವು – ಸಿಸಿಟಿವಿಯಲ್ಲಿ ಸೆರೆಯಾದ ಕಳ್ಳನ ಕೃತ್ಯ..!!

March 31, 2026
ಬಸ್ ನಿಲ್ದಾಣದಲ್ಲಿ ಬ್ರೇಕ್ ವೈಫಲ್ಯ: ಕಂಬಕ್ಕೆ ಡಿಕ್ಕಿಯಾದ ಕೆಎಸ್‌ಆರ್‌ಟಿಸಿ ಬಸ್ : ತಪ್ಪಿದ ಅನಾಹುತ..!!
Featured

ಬಸ್ ನಿಲ್ದಾಣದಲ್ಲಿ ಬ್ರೇಕ್ ವೈಫಲ್ಯ: ಕಂಬಕ್ಕೆ ಡಿಕ್ಕಿಯಾದ ಕೆಎಸ್‌ಆರ್‌ಟಿಸಿ ಬಸ್ : ತಪ್ಪಿದ ಅನಾಹುತ..!!

March 30, 2026

Leave a Reply Cancel reply

Your email address will not be published. Required fields are marked *

Recent News

ಪ್ರೀತಿ ನಿರಾಕರಿಸಿದ್ದಕ್ಕೆ ಯುವಕ ಆತ್ಮಹತ್ಯೆ..!!

ಪ್ರೀತಿ ನಿರಾಕರಿಸಿದ್ದಕ್ಕೆ ಯುವಕ ಆತ್ಮಹತ್ಯೆ..!!

April 11, 2026
ನಿರೂಪಣೆ ಮಾಡುತ್ತಿದ್ದ ವೇಳೆ ವೇದಿಕೆಯಲ್ಲಿ ಕುಸಿದು ಬಿದ್ದು ನಿರೂಪಕ ಮೃತ್ಯು..!!

ನಿರೂಪಣೆ ಮಾಡುತ್ತಿದ್ದ ವೇಳೆ ವೇದಿಕೆಯಲ್ಲಿ ಕುಸಿದು ಬಿದ್ದು ನಿರೂಪಕ ಮೃತ್ಯು..!!

April 11, 2026
ಇನೋವಾ ಕಾರು: ದ್ವಿಚಕ್ರ ವಾಹನ ಡಿಕ್ಕಿ: ಸವಾರ ಗಂಭೀರ..!!

ಇನೋವಾ ಕಾರು: ದ್ವಿಚಕ್ರ ವಾಹನ ಡಿಕ್ಕಿ: ಸವಾರ ಗಂಭೀರ..!!

April 11, 2026
ಲವ್ವರ್‌ ಜೊತೆ ಸೇರಿ ಗಂಡನ ಕೊಲೆ : ದರೋಡೆಕೋರರ ಕೃತ್ಯ ಅಂತ ಬಿಂಬಿಸಿದ್ದ ಖತರ್ನಾಕ್‌ ಪತ್ನಿ ಬಂಧನ.!!

ಲವ್ವರ್‌ ಜೊತೆ ಸೇರಿ ಗಂಡನ ಕೊಲೆ : ದರೋಡೆಕೋರರ ಕೃತ್ಯ ಅಂತ ಬಿಂಬಿಸಿದ್ದ ಖತರ್ನಾಕ್‌ ಪತ್ನಿ ಬಂಧನ.!!

April 11, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.