ವಿಟ್ಲ: ಕಾರು ಮತ್ತು ಟ್ಯಾಂಕರ್ ಲಾರಿ ನಡುವೆ ಅಪಘಾತ ಸಂಭವಿಸಿ ಕಾರಿನಲ್ಲಿದ್ದ ನಾಲ್ವರು ಗಂಭೀರ ಗಾಯಗೊಂಡ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಬುಡೋಳಿ
ಎಂಬಲ್ಲಿ ನಡೆದಿದೆ.

ಮಂಗಳೂರಿನಿಂದ ಬೆಂಗಳೂರು ಕಡೆಗೆ ಹೋಗುತ್ತಿದ್ದ ಟ್ಯಾಂಕರ್ ಮತ್ತು ಬೆಂಗಳೂರು ಕಡೆಯಿಂದ ಮಂಗಳೂರಿಗೆ ಬರುತ್ತಿದ್ದ ಕಾರಿನ ನಡುವೆ ಈ ಅಪಘಾತ ಸಂಭವಿಸಿದೆ.
ಗಾಯಗೊಂಡವರನ್ನು ಮಂಗಳೂರು ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ತಿಳಿದು ಬಂದಿದೆ.