ಮಂಗಳೂರು: ದೇಶದಿಂದ ಅಕ್ರಮವಾಗಿ ವಿದೇಶಿ ಕರೆನ್ಸಿಯನ್ನು ಸಾಗಿಸಲು ಯತ್ನಿಸುತ್ತಿದ್ದ ವ್ಯಕ್ತಿಯನ್ನು ನಗರದ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಪತ್ತೆ ಹಚ್ಚಿದ್ದಾರೆ.
ಯುಎಇ ಕರೆನ್ಸಿಯನ್ನು ದೇಶದಿಂದ ಅಕ್ರಮವಾಗಿ ಸಾಗಿಸಲು ಯತ್ನಿಸಿದ ಕಾಸರಗೋಡು ಮೂಲದ ಪ್ರಯಾಣಿಕನನ್ನು ವಶಕ್ಕೆ ಪಡೆದಿದ್ದು, ತಪಾಸಣೆ ವೇಳೆ 5,77,500 ರೂ. ಮೌಲ್ಯದ 27,500 ಯುನೈಟೆಡ್ ಅರಬ್ ಎಮಿರೇಟ್ಸ್ ಕರೆನ್ಸಿ ಪತ್ತೆಯಾಗಿದೆ.