ಪುತ್ತೂರು: ಎನ್.ಎಸ್.ಯು.ಐ ಪುತ್ತೂರು ವಿಧಾನಸಭಾ ಕ್ಷೇತ್ರ ವತಿಯಿಂದ ‘ನಮ್ಮೂರ ಹೆಮ್ಮೆ’ ಪ್ರತಿಭಾ ಪುರಸ್ಕಾರ ಹಾಗೂ ಸ್ಪರ್ಧಾತ್ಮಕ ಪರೀಕ್ಷೆಯ ಕುರಿತು ಮಾಹಿತಿ ಕಾರ್ಯಗಾರ ಸೆ.3 ರಂದು ಪುತ್ತೂರು ಎಪಿಎಂಸಿ ರಸ್ತೆಯ ಕ್ರಿಸ್ಟೋಫರ್ ಹಾಲ್ ನಲ್ಲಿ ನಡೆಯಲಿದೆ.
ಎನ್.ಎಸ್.ಯು.ಐ ಪುತ್ತೂರು ವಿಧಾನಸಭಾ ಕ್ಷೇತ್ರ ವತಿಯಿಂದ ನಮ್ಮೂರ ಹೆಮ್ಮೆ 2021-22ನೇ ಸಾಲಿನ ಎಸ್. ಎಸ್. ಎಲ್. ಸಿ ಮತ್ತು ಪಿಯುಸಿಯಲ್ಲಿ ಅತ್ಯಾಧಿಕ ಅಂಕ ಗಳಿಸಿದ ತಾಲೂಕಿನ 100ಕ್ಕಿಂತಲೂ ಹೆಚ್ಚಿನ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ ನೂತನ ಅಧ್ಯಕ್ಷರು ಮತ್ತು ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ ನಡೆಯಲಿದೆ.
