ಬಂಟ್ವಾಳ: ಕಾರು ಡಿಕ್ಕಿಯಾಗಿ ಬಾಲಕನೋರ್ವ ಮೃತಪಟ್ಟ ಘಟನೆ ತಾಲೂಕಿನ ಸುರಿಬೈಲು ಕಾಡಂಗಡಿ ಎಂಬಲ್ಲಿ ಶುಕ್ರವಾರ ಸಂಜೆ ನಡೆದಿದೆ.
ಮಹಮ್ಮದಲಿ ಸಖಾಫಿ ಎಂಬವರ ಮಗ ಆದಿಲ್ (4) ಮೃತಪಟ್ಟ ಬಾಲಕ.
ಖಾಸಗಿ ಆಂಗ್ಲ ಮಾದ್ಯಮ ಶಾಲೆಯ ಎಲ್.ಕೆ.ಜಿ. ವಿದ್ಯಾರ್ಥಿ ಎಂದು ತಿಳಿದು ಬಂದಿದೆ.
ಮನೆ ಪಕ್ಕದ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ಮಾರುತಿ ಕಾರೊಂದು ಡಿಕ್ಕಿ ಹೊಡೆದು ಈ ಘಟನೆ ಸಂಭವಿಸಿದೆ ಎನ್ನಲಾಗಿದೆ.
ಘಟನಾ ಸ್ಥಳಕ್ಕೆ ಬಂಟ್ವಾಳ ಸಂಚಾರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿದ್ದಾರೆ.