ಪುತ್ತೂರು: ದುಷ್ಕರ್ಮಿಗಳಿಂದ ಹತ್ಯೆಗೊಳಗಾದ ಪ್ರವೀಣ್ ನೆಟ್ಟಾರು ರವರ ಮಾಲಕತ್ವದ ಅಕ್ಷಯ ಚಿಕನ್ ಸೆಂಟರ್ ಮತ್ತೆ ಆರಂಭಗೊಳ್ಳುತ್ತಿದೆ.

ಮಾಸ್ತಿಕಟ್ಟೆಯಲ್ಲಿರುವ ಈ ಅಂಗಡಿಯು ಬಿಜೆಪಿ ಹಾಗೂ ಹಿಂದೂ ಸಂಘಟನೆಗಳ ಸಕ್ರಿಯ ಸದಸ್ಯ ಯತೀಶ್ ಮುರ್ಕೆತ್ತಿ ಮಾಲಕತ್ವದಲ್ಲಿ ಪುನರಾರಂಭಗೊಳ್ಳುತ್ತಿದೆ.
ಯತೀಶ್ ಈ ಹಿಂದೆ ಎಬಿವಿಪಿಯಲ್ಲಿ ಜಿಲ್ಲಾ ಸಂಚಾಲಕರಾಗಿ ಬಳಿಕ ಸುಳ್ಯ ತಾಲೂಕು ಜವಾಬ್ದಾರಿಯಲ್ಲಿ ತೊಡಗಿಸಿಕೊಂಡಿದ್ದರು. ಯತೀಶ್ ಕೋಳಿ ಸಾಕಾಣಿಕೆಯನ್ನು ಮಾಡುತ್ತಿದ್ದು, ಇದೀಗ ಚಿಕನ್ ಸೆಂಟರ್ ಪ್ರಾರಂಭಿಸುತ್ತಿದ್ದಾರೆ.
ಈ ಅಂಗಡಿಯು ‘ಅಕ್ಷಯ ಫಾರ್ಮ್ ಫ್ರೆಶ್ ಚಿಕನ್’ ಹೆಸರಿನಲ್ಲೇ ಮುಂದುವರೆಯಲಿದೆ.