ವಿಟ್ಲ-ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ನ ಅಸಂಘಟಿತ ಕಾರ್ಮಿಕ ಸಂಘದ ನೂತನ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ಡಿ. ಬಾಬು ರವರು ಆಯ್ಕೆಯಾಗಿದ್ದಾರೆ.

ದಕ್ಷಿಣ ಕನ್ನಡ ಅಸಂಘಟಿತ ಕಾರ್ಮಿಕ ಘಟಕದ ಜಿಲ್ಲಾಧ್ಯಕ್ಷರಾದ ಅಬ್ಬಾಸ್ ಆಲಿ ರವರ ನಿರ್ದೇಶನದ ಮೇರೆಗೆ, ವಿಟ್ಲ-ಉಪ್ಪಿನಂಗಡಿ ಅಧ್ಯಕ್ಷರಾದ ಡಾ. ರಾಜಾರಾಮ್ ರವರ ಶಿಫಾರಸ್ಸಿನ ಮೇರೆಗೆ ಜಿಲ್ಲಾ ಅಸಂಘಟಿತ ಕಾರ್ಮಿಕ ಘಟಕದ ಪ್ರಧಾನ ಕಾರ್ಯದರ್ಶಿಯಾಗಿ ಬಾಬು ರವರನ್ನು ಆಯ್ಕೆ ಮಾಡಲಾಗಿದೆ.