ಪುತ್ತೂರು: ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು(34)ರವರ ಹತ್ಯೆ ಪ್ರಕರಣದ ತನಿಖೆಗೆ ಇಳಿದಿರುವ ರಾಷ್ಟ್ರೀಯ ತನಿಖಾ ದಳ ಅಧಿಕಾರಿಗಳು ಸೆ.6 ರಂದು ಬೆಳ್ಳಂಬೆಳಗ್ಗೆ ಪುತ್ತೂರು ಮತ್ತು ಸುಳ್ಯದಲ್ಲಿ 32 ಕಡೆ ಮನೆ, ಕಟ್ಟಡಗಳಿಗೆ ದಾಳಿ ನಡೆಸಿ ಆರೋಪಿಗಳು ಮತ್ತು ಆರೋಪಿಗಳಿಗೆ ಸಹಕರಿಸಿದವರ ವಿಚಾರಣೆ ನಡೆಸಿರುವುದಾಗಿ ತಿಳಿದು ಬಂದಿದೆ.
ಎನ್.ಐ.ಎ.ಅಧಿಕಾರಿಗಳಿಗೆ ಕರ್ನಾಟಕ ಪೊಲೀಸರು ಸಹಕಾರ ನೀಡಿದ್ದಾರೆ.
ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣವನ್ನು ಗಂಭೀರವಾಗಿ ಸರಕಾರ ಪರಿಗಣಿಸಿ ಹೆಚ್ಚಿನ ತನಿಖೆಯ ದೃಷ್ಟಿಯಿಂದ ಕೇಂದ್ರದ ಎನ್.ಐ.ಎ.ಗೆ ವಹಿಸಿಕೊಡಲಾಗಿತ್ತು.
ಕರಾವಳಿಯಲ್ಲಿ ನಡೆಯುವ ಕೋಮು ಕೊಲೆಗೆ ಕಾರಣ ಮತ್ತು ಕೊಲೆಗಳಿಗೆ ಸಹಕಾರ ನೀಡುವ ಕೆಲವೊಂದು ಪ್ರಮುಖ ವಿಚಾರಗಳನ್ನು ಬೇರು ಸಹಿತ ಮಾಹಿತಿ ಪಡೆದು ಸರಕಾರಕ್ಕೆ ಒಪ್ಪಿಸುವ ಕ್ರಮಕ್ಕೆ ಎನ್.ಐ.ಎ ಮುಂದಾಗಿದ್ದು, ಈಗಾಗಲೇ ತನಿಖೆ ಆರಂಭಿಸಿದೆ.