ಪುತ್ತೂರು: ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪುತ್ತೂರು, ಸುಳ್ಯದ ಹಲವು ಕಡೆ ಎನ್‌ಐಎ ದಾಳಿ ನಡೆಸಿದ್ದು, ಅದರ ಮುಂದುವರಿದ ಭಾಗವಾಗಿ ಇಂದು ಬಂಟ್ವಾಳ ತಾಲೂಕಿನ ಮಿತ್ತೂರಿನ ಫ್ರೀಡಂ ಕಮ್ಯುನಿಟಿ ಹಾಲ್‌ಗೆ ಎನ್‌ಐಎ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಇದೇ ಕಮ್ಯೂನಿಟಿ ಸೆಂಟರ್ ಸ್ಥಳದಲ್ಲಿ ಪಿಎಫ್‌ಐ ತನ್ನ ಕಾರ್ಯಕರ್ತರಿಗೆ ತರಬೇತಿ ನೀಡಲಾಗುತ್ತಿತ್ತು ಎಂದು ತಿಳಿದು ಬಂದಿದೆ.
ಪ್ರವೀಣ್ ನೆಟ್ಟಾರು ಹತ್ಯೆಯ ಪ್ರಮುಖ ಆರೋಪಿ ಶಿಹಾಬುದ್ಧಿನ್ ಗೆ ಇದೇ ಸೆಂಟರ್‌ನಲ್ಲಿ ತರಬೇತಿ ನೀಡಲಾಗಿತ್ತು ಎಂದು ಆರೋಪಿ ಹೇಳಿಕೆ ಹಿನ್ನೆಲೆ ಈ ಸ್ಥಳಕ್ಕೆ ದಾಳಿ ನಡೆಸಿ ಸಾಕ್ಷ್ಯ ಕಲೆ ಹಾಕಿದ್ದಾರೆ.
ಸದ್ಯ ಈ ಸ್ಥಳದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ. ಕಾಡಿನಂತಿರುವ ಪ್ರದೇಶದಲ್ಲಿ ಕಾರ್ಯಾಚರಿಸುತ್ತಿರುವ ತರಬೇತಿ ಸೆಂಟರ್ ನ ಚಲನವಲನಗಳ ಬಗ್ಗೆ ಈ ಹಿಂದೆಯೂ ಸ್ಥಳೀಯ ಸಾರ್ವಜನಿಕರು ಅನುಮಾನ ವ್ಯಕ್ತಪಡಿಸಿದ್ದರು.