ಸುಳ್ಯ: ಆಕಸ್ಮಿಕವಾಗಿ ಮನೆಗೆ ಬೆಂಕಿ ಬಿದ್ದು ಮನೆಯೊಳಗೆ ಮಲಗಿದ್ದ ವ್ಯಕ್ತಿಯೋರ್ವರು ಸಜೀವ ದಹನವಾದ ಘಟನೆ ಸೆ.7 ರಂದು ಮುಂಜಾನೆ ಐವರ್ನಾಡಿನಲ್ಲಿ ನಡೆದಿದೆ.

ಮೃತರನ್ನು ಐವರ್ನಾಡಿನ ಪರ್ಲಿಕಜೆ ನಿವಾಸಿ ಸುಧಾಕರ(47) ಎಂದು ಗುರುತಿಸಲಾಗಿದೆ.
ಇಂದು ಬೆಳಿಗ್ಗೆ ಸುಧಾಕರ ರವರ ಪತ್ನಿ ಟ್ಯಾಪಿಂಗ್ ಗೆಂದು ಹೋಗಿದ್ದು, ಮಗಳು ಶಾಲೆಗೆ ತೆರಳಿದ್ದು, ಸುಧಾಕರ್ ರವರು ಮನೆಯಲ್ಲಿ ಮಲಗಿದ್ದರು ಎನ್ನಲಾಗಿದೆ.
ಈ ವೇಳೆ ಮನೆಗೆ ಬೆಂಕಿ ಹತ್ತಿಕೊಂಡಿದ್ದು, ಸುಧಾಕರ್ ರವರು ಅಸೌಖ್ಯದಿಂದಿದ್ದ ಕಾರಣ ಅವರಿಗೆ ಹೊರಗೆ ಓಡಲು ಸಾಧ್ಯವಾಗದ ಹಿನ್ನೆಲೆ ಸ್ಥಳದಲ್ಲಿಯೇ ಸಜೀವ ದಹನವಾಗಿ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.
ಮನೆಯೊಳಗೆ ಉರಿಸಿದ್ದ ದೀಪದಿಂದ ಬೆಂಕಿ ಹೊತ್ತಿಕೊಂಡಿರಬಹುದು ಎಂದು ಶಂಕಿಸಲಾಗಿದೆ. ಸ್ಥಳಕ್ಕೆ ಪೊಲೀಸರು, ಅಗ್ನಿಶಾಮಕ ದಳದ ಸಿಬ್ಬಂದಿಗಳು ಆಗಮಿಸಿದ್ದಾರೆ.