ಪುತ್ತೂರು: ಭಾರತೀಯ ಜನತಾ ಪಾರ್ಟಿ ಪುತ್ತೂರು ಗ್ರಾಮಾಂತರ ಮಂಡಲ ಹಾಗೂ ಬಿಜೆಪಿ ಶಿಕ್ಷಕರ ಪ್ರಕೋಷ್ಠದ ವತಿಯಿಂದ ಶಿಕ್ಷಕರ ದಿನಾಚರಣೆಯನ್ನು ಬಿಜೆಪಿ ಕಛೇರಿಯಲ್ಲಿ ಆಚರಿಸಲಾಯಿತು.
ಕಾರ್ಯಕ್ರಮದಲ್ಲಿ ಹಿರಿಯ ನಿವೃತ್ತ ಶಿಕ್ಷಕರನ್ನು ಗೌರವಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಾಜ ರಾಧಕೃಷ್ಣ ಆಳ್ವ ವಹಿಸಿದ್ದರು.
ಮುಖ್ಯ ಅತಿಥಿಗಳಾಗಿದ್ದ ಶಾಸಕ ಸಂಜೀವ ಮಠಂದೂರು ರವರು ಶಿಕ್ಷಣದ ಮಹತ್ವ ಮತ್ತು ಶಿಕ್ಷಕರ ಚಿಂತನೆಗಳು ಉತ್ತಮ ಸಮಾಜಕ್ಕೆ ಪೂರಕವಾಗಿರಬೇಕು ಎಂದು ಹೇಳಿದರು. ನಗರಸಭಾ ಅಧ್ಯಕ್ಷರಾದ ಜೀವಂಧರ್ ಜೈನ್ ಮತ್ತು ನಗರ ಮಂಡಲ ಬಿಜೆಪಿ ಅಧ್ಯಕ್ಷರಾದ ಪಿ.ಜಿ ಜಗನ್ನೀವಾಸ ರಾವ್ ಸಂದರ್ಭೋಚಿತವಾಗಿ ಮಾತನಾಡಿದರು.
ಈ ಸಂದರ್ಭದಲ್ಲಿ ಗ್ರಾಮಾಂತರ ಮಂಡಲ ಪ್ರ.ಕಾರ್ಯದರ್ಶಿ ಪುರುಷೋತ್ತಮ ಮುಂಗ್ಲಿಮನೆ, ಮಂಡಲ ಉಪಾಧ್ಯಕ್ಷರಾದ ಮೀನಾಕ್ಷೀ ಮಂಜುನಾಥ್, ಜಿಲ್ಲಾ ಪ.ಪಂಗಡ ಪ್ರ.ಕಾರ್ಯದರ್ಶಿ ಹರೀಶ್ ಬಿಜತ್ರೆ, ರಾಮಣ್ಣ ಗೌಡ ಮೊದಲಾದವರು ಉಪಸ್ಥಿತರಿದ್ದರು. ಪ್ರಕೋಷ್ಠ ಸಂಚಾಲಕರಾದ ಚಂದ್ರಶೇಖರ್ ಸ್ವಾಗತಿಸಿ, ಸಹಸಂಚಾಲಕರಾದ ರುಕ್ಮಯ ಗೌಡ ಧನ್ಯಗೈದರು. ಮಂಡಲ ಎಲ್ಲಾ ಪ್ರಕೋಷ್ಠಗಳ ಪ್ರಭಾರಿ ಹಾಗೂ ಮಂಡಲ ಉಪಾಧ್ಯಕ್ಷರಾದ ಹರಿಪ್ರಸಾದ್ ಯಾದವ್ ಕಾರ್ಯಕ್ರಮ ನಿರೂಪಿಸಿದರು.