ಮಂಗಳೂರು: ಕಿನ್ನಿಗೋಳಿ ಸಮೀಪದ ಕಿಲೆಂಜೂರು ನಿವಾಸಿ, ಆರ್‌ಎಸ್‌ಎಸ್ ಕಾರ್ಯಕರ್ತ ವಿಶ್ವನಾಥ ಶೆಟ್ಟಿ(46 ) ಶನಿವಾರ ರಾತ್ರಿ ಬೈಕ್ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಅವರು ಮುಲ್ಕಿಯ ಬಪ್ಪನಾಡು ಜಾತ್ರೆಗೆ ತೆರಳುತ್ತಿದ್ದ ಸಂದರ್ಭ ಬೈಕ್ ನಿಂದ ಆಕಸ್ಮಿಕವಾಗಿ ಬಿದ್ದಿದ್ದು, ಅವರನ್ನು ಆಸ್ಪತ್ರೆಗೆ ಸೇರಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟರು.
ಆರ್ ಎಸ್ ಎಸ್ ಕಾರ್ಯಕರ್ತರಾಗಿದ್ದ ಅವರು ಬಿಜೆಪಿಯಲ್ಲಿ ಸಕ್ರಿಯರಾಗಿದ್ದರು. ಆಯೋಧ್ಯೆಗೆ ಕರಸೇವಕರಾಗಿಯೂ ತೆರಳಿದ್ದರು. ಸ್ಥಳೀಯ ಧೂಮಾವತಿ ಮಿತ್ರ ಮಂಡಳಿಯ ಮಾಜಿ ಅಧ್ಯಕ್ಷರಾಗಿ ಸಾಮಾಜಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದರು. ಅವರು ಪತ್ನಿ, ಇಬ್ಬರು ಪುತ್ರರನ್ನು ಅಗಲಿದ್ದಾರೆ.