ಕಡಬ: ಮರದ ಕೊಂಬೆ ಕಡಿಯುತ್ತಿದ್ದ ವೇಳೆ ವಿದ್ಯುತ್ ತಂತಿ ಸ್ಪರ್ಶಿಸಿ ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಕಡಬದ ಕುಂತೂರಿನಲ್ಲಿ ನಡೆದಿದೆ.
ಮೃತರನ್ನು ಕುಂತೂರು ಕಾಲಾಯಿಲ್ ನಿವಾಸಿ ಮನೋಜ್(43) ಎಂದು ಗುರುತಿಸಲಾಗಿದೆ.

ಮನೋಜ್ ಅವರು ಮರದ ಕೊಂಬೆಯೊಂದನ್ನು ಕಡಿಯುವಾಗ 33 ಕೆ.ವಿ. ವಿದ್ಯುತ್ ತಂತಿ ತಾಗಿ ಈ ದುರ್ಘಟನೆ ಸಂಭವಿಸಿದೆ.

ಘಟನಾ ಸ್ಥಳಕ್ಕೆ ಮೆಸ್ಕಾಂ ಅಧಿಕಾರಿಗಳು, ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಕಡಬ ಸರಕಾರಿ ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ. ಕಡಬ ಪೊಲೀಸ್ ಠಾಣಾ ವ್ಯಾಪಿಯಲ್ಲಿ ಘಟನೆ ನಡೆದಿದೆ.