ಪುತ್ತೂರು: ಬೆಳ್ಳಿಪ್ಪಾಡಿ ರಮಾನಾಥ ರೈ ಹುಟ್ಟುಹಬ್ಬ ಅಭಿನಂದನ ಸಮಿತಿ, ಯುವ ಕಾಂಗ್ರೆಸ್ ವಿಟ್ಲ-ಉಪ್ಪಿನಂಗಡಿ ಮತ್ತು ವಲಯ ಕಾಂಗ್ರೆಸ್ ಪೆರ್ನೆ-ಬಿಳಿಯೂರು ಇವರ ನೇತೃತ್ವದಲ್ಲಿ ಮಾಜಿ ಸಚಿವರಾದ ‘ಬೆಳ್ಳಿಪ್ಪಾಡಿ ರಮಾನಾಥ ರೈ ಯವರ 70ನೇ ಹುಟ್ಟುಹಬ್ಬ ಆಚರಣೆ’, ’71 ಅಭಿಮಾನಿಗಳಿಂದ ರಕ್ತದಾನ ಸಂಕಲ್ಪ’ ಕಾರ್ಯಕ್ರಮವು ಸೆ.14 ರಂದು ಪೆರ್ನೆ ಎ.ಎಮ್. ಆಡಿಟೋರಿಯಂ ನಲ್ಲಿ ನಡೆಯಲಿದೆ.
ಸಮಾಜದ ವಿವಿಧ ಕ್ಷೇತ್ರಗಳಲ್ಲಿ ಗಣನೀಯವಾಗಿ ಸೇವೆ ಸಲ್ಲಿಸಿದ ಹಲವರಿಗೆ ರಮಾನಾಥ ರೈಯವರಿಂದ ಸನ್ಮಾನ ಕಾರ್ಯಕ್ರಮವು ನಡೆಯಲಿದೆ.
ಈ ಕಾರ್ಯಕ್ರಮದ ಆಮಂತ್ರಣ ಪತ್ರ ಬಿಡುಗಡೆಯು ಸೆ.7 ರಂದು ನಡೆಯಿತು.
ರಕ್ತದಾನ ಶಿಬಿರದ ಉದ್ಘಾಟನೆಯನ್ನು ಮಾಜಿ ಶಾಸಕಿ ಶಕುಂತಲಾ ಶೆಟ್ಟಿ ರವರು ನೆರವೇರಿಸಲಿದ್ದಾರೆ. ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರು, ಶಾಸಕರಾದ ಹರೀಶ್ ಕುಮಾರ್ ರವರು ವಹಿಸಲಿದ್ದಾರೆ.
ಕಾರ್ಯಕ್ರಮದ ಉದ್ಘಾಟನೆಯನ್ನು ಕೆಪಿಸಿಸಿ ಉಪಾಧ್ಯಕ್ಷರು, ಮಾಜಿ ಶಾಸಕರಾದ ಮಧುಬಂಗಾರಪ್ಪ ರವರು ನೆರವೇರಿಸಲಿದ್ದಾರೆ.
ವೇದಮೂರ್ತಿ ವಿದ್ವಾನ್ ಕೆ. ಕೃಷ್ಣಮೂರ್ತಿ ಕಾರಂತ, ಶಂಕರಾಯರಪಾಲು, ಕಳೆಂಜ ರವರು, ಕೆಮ್ಮಾರ ಸಂಶುಲ್ ಉಲೇಮ ಮೆಮೋರಿಯಲ್ ಕಾಲೇಜಿನ ಅಧ್ಯಕ್ಷರಾದ ಎಸ್. ಬಿ., ಮಹಮ್ಮದ್ ಧಾರಿಮಿ, ಪುತ್ತೂರು ಮಾಯಿದೆ ದೇವುಸ್ ಚರ್ಚ್ ಗುರುಗಳಾದ ಲಾರೆನ್ಸ್ ಮಸ್ಕರೆನ್ಸ್ ರವರು ಶುಭಾಶಿರ್ವಾದ ನೀಡಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್, ಯೂತ್ ಕಾಂಗ್ರೆಸ್ ಅಧ್ಯಕ್ಷರಾದ ಲುಕ್ಮಾನ್ ಬಂಟ್ವಾಳ, ರಾಜೀವ್ ಗಾಂಧಿ ವಿಶ್ವವಿದ್ಯಾನಿಲಯದ ನಿಕಟಪೂರ್ವ ಸಿಂಡಿಕೇಟ್ ಸದಸ್ಯರಾದ ಡಾ. ಬಿ. ರಘು, ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಮಾಜಿ ಅಧ್ಯಕ್ಷರಾದ ನಿತ್ಯಾನಂದ ಮುಂಡೋಡಿ, ಉಪ್ಪಿನಂಗಡಿ ನಾಗರಿಕ ಹಿತರಕ್ಷಣಾ ವೇದಿಕೆ ಅಧ್ಯಕ್ಷರಾದ ಹಾಜಿ ಮುಸ್ತಫಾ ಕೆಂಪಿ ರವರು ಆಗಮಿಸಲಿದ್ದಾರೆ ಎಂದು ಅಭಿನಂದನಾ ಸಮಿತಿಯ ಅಧ್ಯಕ್ಷರಾದ ಮುರಳೀಧರ ರೈ ಮಠಂತಬೆಟ್ಟು, ಗೌರವಾಧ್ಯಕ್ಷರಾದ ಡಾ. ರಾಜಾರಾಂ ಕೆ.ಬಿ., ಪ್ರಧಾನ ಕಾರ್ಯದರ್ಶಿಗಳಾದ ಉಮಾನಾಥ ಶೆಟ್ಟಿ, ಯುವ ಕಾಂಗ್ರೆಸ್ ಅಧ್ಯಕ್ಷರಾದ ಮಹಮ್ಮದ್ ಫಾರೂಕ್ ಪೆರ್ನೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.