ಬಂಟ್ವಾಳ: ಕೆಲಸ ಮಾಡುತ್ತಿದ್ದ ವೇಳೆ ವಿದ್ಯುತ್ ಸ್ಪರ್ಶವಾಗಿ ಬಂಟ್ವಾಳದ ವ್ಯಕ್ತಿಯೋರ್ವರು ಕೇರಳದ ಕಂಪೆನಿಯೊದರಲ್ಲಿ ಮೃತಪಟ್ಟ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ಸಜೀಪಮುನ್ನೂರು ಗ್ರಾಮದ ಮರ್ತಾಜೆ ನಿವಾಸಿ ವಿದ್ಯಾದರ ಕುಲಾಲ್(35) ಮೃತ ವ್ಯಕ್ತಿ.

ವಿದ್ಯಾದರ ರವರು ಕೇರಳದ ಖಾಸಗಿ ಎಲೆಕ್ಟ್ರಾನಿಕ್ ಕಂಪೆನಿಯೊಂದರಲ್ಲಿ ಕೆಲಸ ಮಾಡುತ್ತಿದ್ದರು. ಸೆ.5 ರಂದು ಸೋಮವಾರ ಕರ್ತವ್ಯದಲ್ಲಿರುವಾಗ ವಿದ್ಯುತ್ ಹರಿದು ಅವರು ಮೃತಪಟ್ಟ ಘಟನೆ ನಡೆದಿದೆ.
ಮೂಲತ: ಬೆಳ್ಳಾರೆ ನಿವಾಸಿಯಾಗಿದ್ದ ಇವರು ಇತ್ತೀಚೆಗೆ ಸಜೀಪಮುನ್ನೂರು ಗ್ರಾಮದ ಮರ್ತಾಜೆ ಎಂಬಲ್ಲಿ ಜಾಗ ಖರೀದಿ ಮಾಡಿ ಮನೆ ಕಟ್ಟಿದ್ದರು. ಕಳೆದ ಒಂದು ವರ್ಷದ ಹಿಂದೆ ಇವರಿಗೆ ವಿವಾಹವಾಗಿದ್ದು, ಪತ್ನಿ ಮಂಗಳೂರಿನ ಆಸ್ಪತ್ರೆಯೊಂದರಲ್ಲಿ ನರ್ಸ್ ಉದ್ಯೋಗದಲ್ಲಿದ್ದರು.
ಪತ್ನಿ ತುಂಬು ಗರ್ಭಿಣಿಯಾಗಿದ್ದು, ಬರುವ ತಿಂಗಳು ಸೀಮಂತಕ್ಕೆ ದಿನಾಂಕ ನಿಗದಿಯಾಗಿತ್ತು.