ಪುತ್ತೂರಿನ ಹೃದಯ ಭಾಗದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಪ್ರಗತಿ ಸ್ಟಡಿ ಸೆಂಟರ್ ನಲ್ಲಿ ಓಣಂ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಯಿತು.

ವಿದ್ಯಾರ್ಥಿಗಳು ಹಾಗೂ ಉಪನ್ಯಾಸಕರು ಸೇರಿ ಪೂಕಳಂನ್ನು ರಚಿಸಿದರು. ಸಂಸ್ಥೆಯ ಸಂಚಾಲಕರಾದ ಗೋಕುಲ್ ನಾಥ್ ಪಿವಿ ರವರು ಓಣಂ ಹಬ್ಬದ ಆಚರಣೆಯ ಕುರಿತು ವಿದ್ಯಾರ್ಥಿಗಳಿಗೆ ಮಾಹಿತಿಯನ್ನು ನೀಡಿದರು. ವಿದ್ಯಾರ್ಥಿಗಳು ಹಾಗೂ ವಿದ್ಯಾರ್ಥಿನಿಯರು ಕೇರಳ ಶೈಲಿಯ ಉಡುಪನ್ನು ಧರಿಸಿರುವುದು ವಿಶೇಷವಾಗಿತ್ತು.
