ವಿಟ್ಲ: ಕೂಡೂರು ದಿ. ಕೃಷ್ಣ ಭಟ್ ರವರ ರಬ್ಬರ್ ಗೋದಾಮಿಗೆ ಸೆ.8 ರಂದು ಬೆಂಕಿ ತಗುಲಿದ್ದು, ಸುಮಾರು 2-3 ಲಕ್ಷ ನಷ್ಟ ಸಂಭವಿಸಿದೆ ಎಂದು ತಿಳಿದು ಬಂದಿದೆ.
ಸ್ಥಳೀಯರು ಮತ್ತು ಅಗ್ನಿಶಾಮಕ ದಳದ ಸಹಕಾರದಿಂದ ಬೆಂಕಿಯನ್ನು ನಂದಿಸಲಾಯಿತು.
ಘಟನಾ ಸ್ಥಳಕ್ಕೆ ವಿಟ್ಲ ಪಟ್ಟಣ ಪಂಚಾಯತ್ ಸದಸ್ಯರಾದ ಅಶೋಕ್ ಕುಮಾರ್ ಶೆಟ್ಟಿ, ಸ್ಥಳೀಯ ಬಿಜೆಪಿ ಕಾರ್ಯಕರ್ತರು ಭೇಟಿ ನೀಡಿದರು.