ಮಂಗಳೂರು: ನಗರದ ಹೊರವಲಯದಲ್ಲಿರುವ ಡಂಪಿಂಗ್ ಯಾರ್ಡ್ನ ಪ್ಲಾಸ್ಟಿಕ್ ಸಂಸ್ಕರಣಾ ಘಟಕದಲ್ಲಿ ಭಾರೀ ಬೆಂಕಿ ಅವಘಡ ಸಂಭವಿಸಿದೆ. ಶಾರ್ಟ್ ಸರ್ಕ್ಯೂಟ್ನಿಂದ ಬೆಂಕಿ ಹೊತ್ತಿಕೊಂಡಿದೆ ಅಂತಾ ಶಂಕಿಸಲಾಗಿದೆ. ನೋಡ ನೋಡುತ್ತಿದ್ದಂತೆ ಬೆಂಕಿ ಹೊತ್ತಿ ಉರಿದಿದ್ದು, ಟನ್ ಗಟ್ಟಲೆ ಪ್ಲಾಸ್ಟಿಕ್ ತ್ಯಾಜ್ಯ ಭಸ್ಮವಾಗಿದೆ. ರೀಸೈಕ್ಲಿಂಗ್ಗಾಗಿ ಸಂಸ್ಕರಿಸಿ ಇಡಲಾಗಿದ್ದ ಪ್ಲಾಸ್ಟಿಕ್ ತ್ಯಾಜ್ಯ ಸಂಪೂರ್ಣ ಬೆಂಕಿಗಾಹುತಿಯಾಗಿದೆ. ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.
ವಿಷಯ ತಿಳಿದು ಅಗ್ನಿಶಾಮಕ ದಳ ಸಿಬ್ಬಂದಿ ಘಟನಾ ಸ್ಥಳಕ್ಕೆ ದೌಡಾಯಿಸಿದ್ದು, ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಇನ್ನು ಘಟನಾ ಸ್ಥಳಕ್ಕೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.