ಪುತ್ತೂರು: ಪ್ಲಾಸ್ಟಿಕ್ ಬಳಕೆಯನ್ನು ಈಗಾಗಲೇ ನಿಷೇಧ ಮಾಡಲಾಗಿದ್ದು, ಆದರೂ ಕೆಲ ಅಂಗಡಿ-ಮುಂಗಟ್ಟುಗಳಲ್ಲಿ ಪ್ಲಾಸ್ಟಿಕ್ ಬಳಸಲಾಗುತ್ತಿದ್ದು, ಈ ಹಿನ್ನೆಲೆ ಪುತ್ತೂರು ನಗರದ ಹಲವೆಡೆ ನಗರಸಭಾ ಅಧಿಕಾರಿಗಳು ದಾಳಿ ನಡೆಸಿದ ಘಟನೆ ನಡೆದಿದೆ.

ಪ್ಲಾಸ್ಟಿಕ್ ಬಳಕೆಯ ನಿಷೇಧ ನಡುವೆಯೂ ಕೆಲ ಅಂಗಡಿ-ಮುಂಗಟ್ಟುಗಳಲ್ಲಿ ಪ್ಲಾಸ್ಟಿಕ್ ಬಳಸಲಾಗುತ್ತಿದ್ದು, ಈ ಹಿನ್ನೆಲೆ ದಾಳಿ ನಡೆಸಿದ ಅಧಿಕಾರಿಗಳು ಅಂಗಡಿಗಳಿಂದ ಪ್ಲಾಸ್ಟಿಕ್ ಗಳನ್ನು ವಶಪಡಿಸಿ ದಂಡ ವಿಧಿಸಿದರು.

ಕಾರ್ಯಾಚರಣೆಯಲ್ಲಿ ನಗರಸಭಾ ಹಿರಿಯ ಆರೋಗ್ಯಾಧಿಕಾರಿಗಳಾದ ರಾಮಚಂದ್ರ, ಶ್ವೇತಾ ಕಿರಣ್, ವರಲಕ್ಷ್ಮಿ, ಸ್ಯಾನಿಟರಿ ಸೂಪರ್ವೈಸರ್ ಗಳಾದ ಅಮಿತ್, ನಾಗೇಶ್, ಚಾಲಕ ರಾಧಾಕೃಷ್ಣ ರವರು ಪಾಲ್ಗೊಂಡಿದ್ದರು.
