ಪುತ್ತೂರು: ಖಾಸಗಿ ಬಸ್, ಕಾರು ಮತ್ತು ಪಿಕಪ್ ವಾಹನದ ನಡುವೆ ಸರಣಿ ಡಿಕ್ಕಿ ಸಂಭವಿಸಿದ ಘಟನೆ ನೆಹರುನಗರದಲ್ಲಿ ನಡೆದಿದೆ.
ಮಂಗಳೂರಿನಿಂದ ಪುತ್ತೂರು ಕಡೆಗೆ ಬರುತ್ತಿದ್ದ ಖಾಸಗಿ ಬಸ್ ಮಹೇಶ್ ನೆಹರು ನಗರದ ಸಮೀಪ ಶಿಫ್ಟ್ ಕಾರೊಂದಕ್ಕೆ ಹಿಂದಿನಿಂದ ಡಿಕ್ಕಿ ಹೊಡೆದಿದ್ದು, ಕಾರು ಅದರ ಮುಂಭಾಗದಲ್ಲಿದ್ದ ಪಿಕಪ್ ವಾಹನಕ್ಕೆ ಡಿಕ್ಕಿ ಹೊಡೆದಿದ್ದು, ಈ ಹಿನ್ನೆಲೆ ಮೂರು ವಾಹನಗಳ ನಡುವೆ ಸರಣಿ ಡಿಕ್ಕಿ ಸಂಭವಿಸಿದೆ.
ಘಟನೆಯಿಂದಾಗಿ ಯಾವುದೇ ಅಪಾಯ ಸಂಭವಿಸಿಲ್ಲ ಎಂದು ವರದಿಯಾಗಿದೆ.