ದೊಡ್ಡಬಳ್ಳಾಪುರ: ರಾಜ್ಯ ಬಿಜೆಪಿ ಸರ್ಕಾರದ ಮೂರು ವರ್ಷಗಳ ಸಾಧನೆಯನ್ನು ಮುಂದಿಟ್ಟುಕೊಂಡು ಬಿಜೆಪಿ ಶಕ್ತಿ ಪ್ರದಶರ್ನಕ್ಕೆ ಮುಂದಾಗಿದೆ. ಈ ಹಿನ್ನೆಲೆಯಲ್ಲಿ ಇಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ಅದ್ದೂರಿ ಬಿಜೆಪಿ ಜನಸ್ಪಂದನ ಸಮಾವೇಶ ಆಯೋಜನೆ ಮಾಡಿದೆ. ಈ ಸಮಾವೇಶದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ರವರು ದುಷ್ಕರ್ಮಿಗಳಿಂದ ಹತ್ಯೆಗೀಡಾದ ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ರವರ ಮನೆಯವರಿಗೆ ಸಿಎಂ ಕಚೇರಿಯಲ್ಲಿ ಕೆಲಸ ನೀಡುವುದಾಗಿ ಘೋಷಣೆ ಮಾಡಿದ್ದಾರೆ.
ಬಿಜೆಪಿ ಜನಸ್ಪಂದನ ಸಮಾವೇಶದಲ್ಲಿ ಸಿಎಂ ಬೊಮ್ಮಾಯಿ ಪ್ರವೀಣ್ ನೆಟ್ಟಾರು ಮನೆಯವರಿಗೆ ಸಿಎಂ ಕಚೇರಿಯಲ್ಲಿ ಕೆಲಸ ನೀಡುವುದಾಗಿ ಘೋಷಣೆ ಮಾಡಿದ್ದಾರೆ.
ಸುಮಾರು 40 ಎಕರೆ ವಿಸ್ತೀರ್ಣದಲ್ಲಿ ಜನಸ್ಪಂದನ ಸಮಾವೇಶ ಆಯೋಜನೆ ಮಾಡಿದ್ದು, 3 ಲಕ್ಷ ಜನರಿಗೆ ಊಟದ ವ್ಯವಸ್ಥೆ, ಸುಮಾರು 200 ಎಕರೆ ಪ್ರದೇಶದಲ್ಲಿ ವಾಹನ ನಿಲುಗಡೆಗೆ ವ್ಯವಸ್ಥೆ, ಸರ್ಕಾರಿ ಹಾಗೂ ಖಾಸಗಿ ಸೇರಿದಂತೆ 5 ಸಾವಿರ ಬಸ್ಗಳ ವ್ಯವಸ್ಥೆ ಮಾಡಲಾಗಿದೆ. ಬಿಜೆಪಿ ಮುಂಡರು, ಶಾಸಕರು, ಕೇಂದ್ರ ಸಚಿವೆ ಸ್ಮೃತಿ ಇರಾನಿ ಸೇರಿ ಹಲವು ಗಣ್ಯರು ಭಾಗಿಯಾಗಿದ್ದಾರೆ.
ಬಿಜೆಪಿಗೆ ಕಾರ್ಯಕರ್ತರೇ ಜೀವಾಳ …
— BJP Karnataka (@BJP4Karnataka) September 10, 2022
ಮತಾಂಧರಿಂದ ಹತ್ಯೆಗೀಡಾದ ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರ್ ಅವರ ಮನೆಯವರಿಗೆ ತನ್ನ ಕಛೇರಿಯಲ್ಲಿ ಉದ್ಯೋಗ ನೀಡುವುದಾಗಿ ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ @BSBommai ಅವರು ಘೋಷಿಸಿದ್ದಾರೆ.#JanaSpandana pic.twitter.com/dc2qcHIP1u