ಬಂಟ್ವಾಳ: ನಿಯಂತ್ರಣ ತಪ್ಪಿ ಪೆಟ್ರೋಲ್ ಸಾಗಿಸುತ್ತಿದ್ದ ಟ್ಯಾಂಕರ್ ಪಲ್ಟಿಯಾದ ಘಟನೆ ಸೆ.11 ರಂದು ಪೆರ್ನೆಯಲ್ಲಿ ನಡೆದಿದೆ.

ಹೆಚ್.ಪಿ.ಸಿ.ಎಲ್. ಗೆ ಸೇರಿದ ಪೆಟ್ರೋಲ್ ಟ್ಯಾಂಕರ್ ಚಾಲಕನ ನಿಯಂತ್ರಣ ಪಲ್ಟಿಯಾಗಿದ್ದು, ಘಟನೆಯಿಂದಾಗಿ ಯಾವುದೇ ಅಪಾಯ ಸಂಭವಿಸಿಲ್ಲ ಎಂದು ವರದಿಯಾಗಿದೆ.
ಘಟನೆಯಿಂದಾಗಿ ರಸ್ತೆ ಸಂಚಾರದಲ್ಲಿ ಅಸ್ತವ್ಯಸ್ತವಾಗಿ ಕೆಲ ಹೊತ್ತುಗಳ ಕಾಲ ಟ್ರಾಫಿಕ್ ಜಾಮ್ ಉಂಟಾಗಿದ್ದು, ಪೆರ್ನೆ ಪಂಚಾಯತ್ ಸದಸ್ಯರಾದ ಫಾರೂಕ್ ರವರು ಟ್ರಾಫಿಕ್ ಅನ್ನು ನಿಯಂತ್ರಣಗೊಳಿಸಿ ಸುಗಮವಾಗಿ ವಾಹನ ಸಂಚಾರವಾಗುವಂತೆ ಅವಕಾಶ ಕಲ್ಪಿಸಿಕೊಟ್ಟರು.