ಪುತ್ತೂರು: ದುಷ್ಕರ್ಮಿಗಳಿಂದ ಹತ್ಯೆಗೀಡಾದ ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ರವರ ಮನೆಯವರು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ರವರನ್ನು ಅವರ ಸ್ವಗೃಹದಲ್ಲಿ ಭೇಟಿಯಾಗಿ ಮಾತುಕತೆ ನಡೆಸಿದರು.

ಪ್ರವೀಣ್ ನೆಟ್ಟಾರು ರವರ ಮನೆಯವರಿಗೆ ಸಂಸದ ನಳಿನ್ ಕುಮಾರ್ ಕಟೀಲ್ ರವರ ನೇತೃತ್ವದಲ್ಲಿ ನೂತನ ಮನೆ ನಿರ್ಮಾಣ ಮಾಡಿಕೊಡುವ ಬಗ್ಗೆ ನಿರ್ಧರಿಸಲಾಗಿದ್ದು, ಈ ಬಗ್ಗೆ ಮನೆಯವರು ಕೂಡ ಒಪ್ಪಿಗೆ ಸೂಚಿಸಿದ್ದಾರೆ.
ಈ ಹಿನ್ನೆಲೆ ಮನೆ ನಿರ್ಮಾಣಕ್ಕೆ ಮುಗ್ರೋಡಿ ಕನ್ಸ್ಟ್ರಕ್ಷನ್ ರವರಿಗೆ ಸಂಸದ ನಳಿನ್ ಕುಮಾರ್ ರವರ ಸ್ವಗೃಹದಲ್ಲಿ ಪ್ರವೀಣ್ ಮನೆಯವರ ಮೂಲಕ ಕಾಂಟ್ರಾಕ್ಟ್ ಕೊಡಲಾಯಿತು.

ಈ ಸಂದರ್ಭದಲ್ಲಿ ಬಿಜೆಪಿ ಮುಖಂಡರು ಹಾಗೂ ಕೆಲ ಕಾರ್ಯಕರ್ತರು ಉಪಸ್ಥಿತರಿದ್ದರು.
ಬಿಜೆಪಿ ಮುಖಂಡ ಪ್ರವೀಣ್ ರವರ ಮನೆ ನಿರ್ಮಾಣಕ್ಕೆ ಸಂಸದ ನಳಿನ್ ಕುಮಾರ್ ಕಟೀಲ್ ರವರೇ ಮುಂದಾಗಿದ್ದು, ಈ ಮೂಲಕ ತಮ್ಮ ಕಾರ್ಯಕರ್ತನ ಕನಸನ್ನು ನನಸು ಮಾಡುವ ಮಹತ್ವದ ಹೆಜ್ಜೆಯನ್ನಿಟ್ಟಿದ್ದಾರೆ.