ವಿಟ್ಲ: ಮರ ಕಡಿಯುತ್ತಿದ್ದಾಗ ಕೆಳಗೆ ಬಿದ್ದು, ಗಂಭೀರ ಗಾಯಗೊಂಡಿದ್ದ ಯುವಕ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ ಘಟನೆ ವಿಟ್ಲದಲ್ಲಿ ನಡೆದಿದೆ.
ಮೃತರನ್ನು ಕೊಳ್ನಾಡು ಗ್ರಾಮದ ತಾಳಿತ್ತನೂಜಿ ನಿವಾಸಿ ಸುಲೈಮಾನ್ ಎಂಬವರ ಪುತ್ರ ಶರೀಫ್(31) ಎಂದು ಗುರುತಿಸಲಾಗಿದೆ.

ಶರೀಫ್ ರವರು ಉತ್ತಮ ಕಬಡ್ಡಿ ಆಟಗಾರರಾಗಿದ್ದು, ಮರ ಕಡಿಯುತ್ತಿದ್ದಾಗ ಕೆಳಗೆ ಬಿದ್ದು, ಗಂಭೀರ ಗಾಯಗೊಂಡಿದ್ದರು. ಗಂಭೀರ ಗಾಯಗೊಂಡಿದ್ದ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೇ ಚಿಕಿತ್ಸೆ ಫಲಕಾರಿಯಾಗದೆ ಇಂದು ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.