ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸೆ.26 ರಿಂದ ಅಕ್ಟೋಬರ್ 10ರ ವರೆಗೆ ರಜೆ ನೀಡುವಂತೆ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಆದೇಶ ಹೊರಡಿಸಿದ್ದಾರೆ.
ಸಚಿವರೊಂದಿಗೆ ಚರ್ಚಿಸಿರುವ ಶಾಸಕ ವೇದವ್ಯಾಸ್ ಕಾಮತ್ ಅವರು ಹಬ್ಬಕ್ಕೆ ಪೂರಕವಾಗುವಂತೆ ರಜೆ ನೀಡಲು ಮನವಿ ಮಾಡಿಕೊಂಡಿದ್ದರು.ಅದಕ್ಕೆ ಸ್ಪಂದಿಸಿರುವ ಸಚಿವರು ಅಕ್ಟೋಬರ್ 2ರ ಗಾಂಧಿ ಜಯಂತಿಯ ದಿನವನ್ನು ಹೊರತುಪಡಿಸಿ ದಸರಾ ರಜೆ ನೀಡುವಂತೆ ಸೂಚಿಸಿದ್ದಾರೆ.
ಈ ಕುರಿತು ಮಾತನಾಡಿದ ಶಾಸಕ ಕಾಮತ್, ಸೆ. 26ರಿಂದ ನವರಾತ್ರಿ ಪ್ರಾರಂಭವಾಗುತ್ತಿದ್ದು, ಅದ್ದೂರಿಯಾಗಿ ನಡೆಯುವ ಮಂಗಳೂರು ದಸರಾ, ಶತಮಾನೋತ್ಸವದ ಸಂಭ್ರಮಾಚರಣೆಯಲ್ಲಿರುವ ರಥಬೀದಿ ಶಾರದಾ ಮಹೋತ್ಸವ, ಮಂಗಳಾದೇವಿ ದೇವಸ್ಥಾನದ ನರವಾತ್ರಿ ಸೇರಿದಂತೆ ಜಿಲ್ಲೆಯಲ್ಲಿ ಅತ್ಯಂತ ಸಂಭ್ರಮದಲ್ಲಿ ಹಬ್ಬವನ್ನು ಆಚರಿಸಲಾಗುತ್ತದೆ. ಆದ್ದರಿಂದ ರಜೆಯನ್ನು ಹಬ್ಬದ ಸಂದರ್ಭದಲ್ಲಿಯೇ ನೀಡುವಂತೆ ಮನವಿ ಮಾಡಿದ್ದೆವು ಎಂದರು.