ಪುತ್ತೂರು: ಬ್ಲಾಕ್ ಕಾಂಗ್ರೆಸ್ ಕಾರ್ಯದರ್ಶಿ ಹಾಗೂ ಉದ್ಯಮಿ ರೋಶನ್ ರೈ, ಮಾಜಿ ಶಾಸಕಿ ಶಕುಂತಲಾ ಟಿ ಶೆಟ್ಟಿ ಹಾಗೂ ಬಳಗದವರಿಂದ ಬಂಟ್ವಾಳದ ಮಾಜಿ ಶಾಸಕರು ಹಾಗೂ ಮಾಜಿ ಸಚಿವರಾಗಿದ್ದ ಹಾಗೂ ಕೆಪಿಸಿಸಿಯ ಉಪಾಧ್ಯಕ್ಷರಾಗಿರುವ ಬೆಳ್ಳಿಪ್ಪಾಡಿ ರಮಾನಾಥ್ ರೈ ಯವರ 71ನೇ ಹುಟ್ಟುಹಬ್ಬವನ್ನು ಪುತ್ತೂರಿನ ಬೀರಮಲೆಯಲ್ಲಿರುವ ವಿಶೇಷ ಮಕ್ಕಳ ಪ್ರಜ್ಞಾ ಆಶ್ರಮದಲ್ಲಿ ಅನ್ನಸಂತರ್ಪಣೆಯ ಮೂಲಕ ಆಚರಿಸಲಾಯಿತು.
ಈ ಸಂದರ್ಭದಲ್ಲಿ ಕೋಟಿ ಚೆನ್ನಯ ಜೋಡುಕರೆ ಕಂಬಳ ಸಮಿತಿ ಅಧ್ಯಕ್ಷ ಚಂದ್ರಹಾಸ ಶೆಟ್ಟಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ. ಬಿ. ವಿಶ್ವನಾಥ್ ರೈ, ನಗರ ಕಾಂಗ್ರೆಸ್ ಅಧ್ಯಕ್ಷ ಮಹಮ್ಮದ್ ಅಲಿ, ಯೂತ್ ಕಾಂಗ್ರೆಸ್ ಅಧ್ಯಕ್ಷ ಶ್ರೀಪ್ರಸಾದ್ ಪಾಣಾಜೆ ಹಾಗೂ ಮತ್ತಿತರರು ಉಪಸ್ಥಿತರಿದ್ದರು.