ಪುತ್ತೂರು: ಬೆಳ್ಳಿಪ್ಪಾಡಿ ರಮಾನಾಥ್ ರೈ ಅಭಿಮಾನಿ ಬಳಗ ಪುತ್ತೂರು ಇವರ ನೇತೃತ್ವದಲ್ಲಿ ‘ಬೆಳ್ಳಿಪ್ಪಾಡಿ ರಮಾನಾಥ್ ರೈ ಯವರ 71ನೇ ಹುಟ್ಟುಹಬ್ಬ ಆಚರಣೆಯು ಸೆ.15 ರಂದು ಬಿರುಮಲೆ ಬೆಟ್ಟದ ಪ್ರಜ್ಞಾ ಆಶ್ರಮದಲ್ಲಿ ನಡೆಯಲಿದೆ.
ಆಶ್ರಮದ ಸದಸ್ಯರಿಗೆ ಬಟ್ಟೆ ವಿತರಣೆ, ಸಾಧಕರಿಗೆ ಸನ್ಮಾನ, ಚಂದ್ರಶೇಖರ ಹೆಗ್ಡೆ ಮತ್ತು ತಂಡದವರಿಂದ ಸಂಗೀತ ರಸಮಂಜರಿ ಕಾರ್ಯಕ್ರಮ ನಡೆಯಲಿದೆ.
ಕಾರ್ಯಕ್ರಮದ ಪ್ರಸ್ತಾವನೆಯನ್ನು ಎನ್ ಎಸ್ ಯುಐ ಕರ್ನಾಟಕ ಸಮಿತಿ ಉಪಾಧ್ಯಕ್ಷರಾದ ಫಾರೂಕ್ ಬಯವೆ ರವರು ಮಾಡಲಿದ್ದಾರೆ.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ರಾಮಕೃಷ್ಣ ಪ್ರೌಢಶಾಲೆಯ ಸಂಚಾಲಕರಾದ ಕಾವು ಹೇಮನಾಥ್ ಶೆಟ್ಟಿ ರವರು ವಹಿಸಲಿದ್ದಾರೆ. ಕಾರ್ಯಕ್ರಮದ ಉದ್ಘಾಟನೆಯನ್ನು ಮಹಾಲಿಂಗೇಶ್ವರ ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಮಾಜಿ ಅಧ್ಯಕ್ಷರಾದ ಸುಧಾಕರ ಶೆಟ್ಟಿ ನೆಲ್ಲಿಕಟ್ಟೆ ರವರು ವಹಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ರಾಜೀವ್ ಗಾಂಧಿ ವಿಶ್ವವಿದ್ಯಾನಿಲಯದ ಮಾಜಿ ಸಿಂಡಿಕೇಟ್ ಸದಸ್ಯರಾದ ಡಾ. ಬಿ. ರಘು, ಯುವ ವಾಹಿನಿ ಕೇಂದ್ರ ಸಮಿತಿ ಮಾಜಿ ಅಧ್ಯಕ್ಷರಾದ ಡಾ. ರಾಜಾರಾಮ್ ಕೆ.ಬಿ., ರಾಜ್ಯ ಧಾರ್ಮಿಕ ಪರಿಷತ್ ಮಾಜಿ ಸದಸ್ಯರಾದ ಜಗನ್ನಿವಾಸ್ ರಾವ್ ಎನ್.ಕೆ., ಧಾರ್ಮಿಕ ಮುಖಂಡರಾದ ಕೆ.ಆರ್. ಹುಸೈನ್ ದಾರಿಮಿ ರೆಂಜಲಾಡಿ, ಮಹಿಳಾ ಕಾಲೇಜು ನಿವೃತ್ತ ಪ್ರಾಂಶುಪಾಲರಾದ ಝೆವಿಯರ್ ಡಿಸೋಜಾ, ಪುತ್ತೂರು ಬ್ಲಾಕ್ ಯೂತ್ ಕಾಂಗ್ರೆಸ್ ಅಧ್ಯಕ್ಷರಾದ ಶ್ರೀಪ್ರಸಾದ್ ಪಾಣಾಜೆ ರವರು ಆಗಮಿಸಲಿದ್ದಾರೆ ಎಂದು ಕಾರ್ಯಕ್ರಮ ಆಯೋಜರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.