ಪುತ್ತೂರು: ತಿಂಗಳಾಡಿಯಲ್ಲಿ ಅಂಗಡಿಯೊಂದರಲ್ಲಿ ಜಿನಸಿ
ಖರೀದಿಸುತ್ತಿದ್ದ ಹಿಂದೂ ಯುವತಿಗೆ ಅಂಗಡಿ ಮಾಲಕನಿಲ್ಲದ ಸಂದರ್ಭ ಅಲ್ಲಿದ್ದ ಅನ್ಯಕೋಮಿನ ಯುವಕನೋರ್ವ ಲೈಂಗಿಕ ಕಿರುಕುಳ ನೀಡಿರುವ ಘಟನೆ ನಡೆದಿದೆ.
ಆರೋಪಿಯನ್ನು ಕೂಡಲೇ ಬಂಧಿಸಿ ಕಾನೂನು ಕ್ರಮ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿ ಸ್ಥಳದಲ್ಲಿ ನೂರಾರು ಮಂದಿ ಹಿಂದೂ ಕಾರ್ಯಕರ್ತರು ಜಮಾಯಿಸಿದ್ದಾರೆ.
ಸರ್ವೆ ನೇರೋಳಡ್ಕದ ಮಹಿಳೆಯೋರ್ವರು ಸೆ.14 ರಂದು ಸಂಜೆ ತಿಂಗಳಾಡಿಯಲ್ಲಿರುವ ಸೂಪರ್ ಬಝಾರ್ ಅಂಗಡಿಗೆ ಜಿನಸಿ ಖರೀದಿಸಲೆಂದು ಬಂದಿದ್ದರು. ಅಂಗಡಿ ಮಾಲಕ ಹಮೀದ್ ಪಟ್ಟೆ
ಚಹಾ ಕುಡಿಯಲೆಂದು ಹೊರಗಡೆ ಹೋಗಿದ್ದ ಸಂದರ್ಭ ಅಂಗಡಿಯಲ್ಲಿದ್ದ ಸೊರಕೆ ಓಲೆಮುಂಡೋವು ಸಮೀಪದ
ಬದ್ರುದ್ದೀನ್ ಯಾನೆ ಬದ್ರು ಎಂಬಾತ ಮಹಿಳೆಯ ಮೈ ಮೇಲೆ
ಕೈ ಹಾಕಿ ಲೈಂಗಿಕ ಕಿರುಕುಳ ನೀಡಿದ್ದ. ಈ ವೇಳೆ ಮಹಿಳೆ ಬೊಬ್ಬೆ ಹೊಡೆದ ಪರಿಣಾಮ ಅಲ್ಲಿ ಜನ ಸೇರಿದ್ದರಿಂದ ಆರೋಪಿ ಬದ್ರುದ್ದೀನ್ ಯಾನೆ ಬದ್ರು ಅಲ್ಲಿಂದ ಪರಾರಿಯಾಗಿದ್ದಾನೆ ಎನ್ನಲಾಗಿದೆ.
ವಿಷಯ ತಿಳಿದ ಕೂಡಲೇ ಹಿಂದೂ ಸಂಘಟನೆಗಳ ನೇತೃತ್ವದಲ್ಲಿ
ನೂರಾರು ಹಿಂದೂ ಯುವಕರು ಸ್ಥಳದಲ್ಲಿ ಜಮಾಯಿಸಿದ್ದು, ಆರೋಪಿಯನ್ನು ಕೂಡಲೇ ಬಂಧಿಸಬೇಕು ಎಂದು, ನೆರೆದವರು ಪೊಲೀಸರನ್ನು ಆಗ್ರಹಿಸಿದ್ದು ಸೆ.15ರ ಬೆಳಿಗ್ಗೆ 8 ಗಂಟೆಯೊಳಗೆ ಆರೋಪಿಯನ್ನು ಬಂಧಿಸದೇ ಇದ್ದಲ್ಲಿ ಹೋರಾಟ ನಡೆಸುವುದಾಗಿ ತಿಳಿಸಿದ್ದಾರೆ.
ಘಟನೆ ಬಗ್ಗೆ ಶಾಸಕ ಸಂಜೀವ ಮಠಂದೂರು ರವರು ಎಸ್.ಪಿ. ಅವರ ಜೊತೆ ಮಾತನಾಡಿದ್ದು, ಕೂಡಲೇ ಆತನನ್ನು ಬಂಧಿಸುವಂತೆ ಸೂಚನೆ ನೀಡಿದ್ದಾರೆ ಎಂದು ತಿಳಿದು ಬಂದಿದೆ..