ಪುತ್ತೂರು: ತಿಂಗಳಾಡಿಯಲ್ಲಿ ಅಂಗಡಿಯೊಂದರಲ್ಲಿ ಜಿನಸಿ
ಖರೀದಿಸುತ್ತಿದ್ದ ಹಿಂದೂ ಯುವತಿಗೆ ಅಂಗಡಿ ಮಾಲಕನಿಲ್ಲದ ಸಂದರ್ಭ ಅಲ್ಲಿದ್ದ ಅನ್ಯಕೋಮಿನ ಯುವಕನೋರ್ವ ಲೈಂಗಿಕ ಕಿರುಕುಳ ನೀಡಿರುವ ಘಟನೆ ನಡೆದಿದ್ದು, ಈ ಘಟನೆಯನ್ನು ಹಿಂದೂ ಜಾಗರಣ ವೇದಿಕೆ ಖಂಡಿಸಿದ್ದು, ನಾಳೆ ನಡೆಯುವ ಖಂಡನಾ ಸಭೆ ಮತ್ತು ಬಂದ್ ಗೆ ಬೆಂಬಲವನ್ನು ಸೂಚಿಸಿದೆ.
ಪುತ್ತೂರು ತಾಲೂಕಿನ ತಿಂಗಳಾಡಿಯಲ್ಲಿ ಇಂದು ಸಂಜೆ ಹಿಂದೂ ಯುವತಿಯ ಜೊತೆ ಅನ್ಯಕೋಮಿನ ಯುವಕ ಅಸಭ್ಯವಾಗಿ ವರ್ತಿಸಿದ ಘಟನೆ ನಡೆದಿದ್ದು, ಆರೋಪಿಯನ್ನು ತಕ್ಷಣ ಬಂಧಿಸುವಂತೆ ಪೊಲೀಸ್ ಇಲಾಖೆಯಲ್ಲಿ ನೂರಾರು ಕಾರ್ಯಕರ್ತರು ಸೇರಿ ಆಗ್ರಹಿಸಲಾಗಿದ್ದು, ನಾಳೆ ಬೆಳಿಗ್ಗೆ 8.00 ಗಂಟೆಯ ಒಳಗೆ ಪೊಲೀಸ್ ಇಲಾಖೆ ಆರೋಪಿಯನ್ನು ಬಂಧಿಸದೇ ಇದ್ದಲ್ಲಿ ತಿಂಗಳಾಡಿಯ ಪೇಟೆ ಬಂದ್ ಮಾಡುವುದರ ಜೊತೆ ಬೃಹತ್ ಪ್ರತಿಭಟನೆಯನ್ನು ನಡೆಸಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.