ಪುತ್ತೂರು: ತಾಲೂಕಿನ ತಿಂಗಳಾಡಿಯಲ್ಲಿ ಹಿಂದೂ ಯುವತಿಯ ಜೊತೆ ಅನ್ಯಕೋಮಿನ ಯುವಕ ಅಸಭ್ಯವಾಗಿ ವರ್ತಿಸಿದ ಘಟನೆ ನಡೆದಿದ್ದು, ಈ ಘಟನೆಯನ್ನು ವಿರೋಧಿಸಿ ಹಿಂದೂ ಸಂಘಟನೆ ಕಾರ್ಯಕರ್ತರು ಹಾಗೂ ಮಹಿಳೆಯರು ರಸ್ತೆ ತಡೆದು ಪ್ರತಿಭಟನೆ ನಡೆಸುತ್ತಿದ್ದಾರೆ.
ತಿಂಗಳಾಡಿ ರಸ್ತೆಯಲ್ಲಿ ಕುಳಿತು ಮಹಿಳೆಯರು ಮತ್ತು ಹಿಂದೂ ಸಂಘಟನೆ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದು, ಸ್ಥಳದಲ್ಲಿ ನೂರಾರು ಮಂದಿ ಜಮಾಯಿಸಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ಈಗಾಗಲೇ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಆರೋಪಿಗೆ ಕಠಿಣ ಶಿಕ್ಷೆ ನೀಡುವಂತೆ ಆಗ್ರಹಿಸಿ ಪ್ರತಿಭಟಿಸಲಾಗುತ್ತಿದೆ ಎಂದು ವರದಿಯಾಗಿದೆ.