ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರ ಮೊಬೈಲ್ ನಂಬರ್ ಹ್ಯಾಕ್ ಆಗಿದೆ. ಈ ಹಿನ್ನೆಲೆಯಲ್ಲಿ ಎಚ್ಚರಿಕೆ ವಹಿಸುವಂತೆ ಜಿಲ್ಲಾಧಿಕಾರಿಗಳು ಮನವಿ ಮಾಡಿಕೊಂಡಿದ್ದಾರೆ.
8590710748 ಮೊಬೈಲ್ ನಂಬರ್ ನಿಂದ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಅವರ ಹೆಸರು ಹಾಗೂ ಫೋಟೋ ಬಳಸಿ ವಾಟ್ಸ್ ಅಪ್ ಮೂಲಕ ಸಂದೇಶ ಕಳುಹಿಸಿ ಅಪರಿಚಿತರು ಸಹಾಯ ಅಥವಾ ಹಣವನ್ನು ವರ್ಗಾಯಿಸಲು ಕೇಳಬಹುದು.
ಆ ನಂಬರ್ ಜಿಲ್ಲಾಧಿಕಾರಿಯವರದ್ದಾಗಿರುವುದಿಲ್ಲ ಆದ ಕಾರಣ ಯಾರೂ ಕೂಡ ಯಾವುದೇ ರೀತಿಯಲ್ಲಿ ಸಹಾಯ ಅಥವಾ ಹಣವನ್ನು ಆ ನಂಬರ್ ಗೆ ವರ್ಗಾಯಿಸದಂತೆ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರು ಮನವಿ ಮಾಡಿದ್ದಾರೆ.
8590710748 ಈ ನಂಬರ್ ನಿಂದ ಯಾವುದೇ ರೀತಿಯ ಮನವಿ ಬಂದಲ್ಲಿ ಅದನ್ನು ಬ್ಲಾಕ್ ಮಾಡಿ ವರದಿ ಮಾಡುವಂತೆಯೂ ಜಿಲ್ಲಾಧಿಕಾರಿಯವರು ಕೋರಿದ್ದಾರೆ.