ರಾಹುಲ್ ಗಾಂಧಿ ನೇತೃತ್ವದಲ್ಲಿ ಕನ್ಯಾಕುಮಾರಿಯಿಂದ ಕಾಶ್ಮೀರದ ವರೆಗೆ ನಡೆಯುತ್ತಿರುವ ಕಾಂಗ್ರೆಸ್ ಪಕ್ಷದ ‘ಭಾರತ್ ಜೋಡೋ’ ಯಾತ್ರೆಯ ಸಂಯೋಜಕರನ್ನಾಗಿ ದಿವ್ಯಪ್ರಭಾ ಗೌಡ ಅವರನ್ನು ನೇಮಕ ಮಾಡಲಾಗಿದೆ.
ಸಮಾಜ ಕಲ್ಯಾಣ ಮಂಡಳಿಯ ಮಾಜಿ ಅಧ್ಯಕ್ಷೆಯಾಗಿರುವ ದಿವ್ಯಾ ಪ್ರಭಾ ಗೌಡ ಚಿಲ್ತಡ್ಕ ಅವರು, ಪುತ್ತೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಮುಖಂಡರಾಗಿದ್ದಾರೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ರಂಧೀಪ್ ಸಿಂಗ್ ಸುರ್ಜೇವಾಲ ಅವರು ಕೆಪಿಸಿಸಿ ಅಧ್ಯಕ್ಷರಾದ ಡಿಕೆ ಶಿವಕುಮಾರ್ ಅವರ ಶಿಫಾರಸ್ಸು ಮೇರೆಗೆ ದಿವ್ಯಾ ಪ್ರಭಾ ಗೌಡ ರವರನ್ನು ಆಯ್ಕೆ ಮಾಡಿ ಆದೇಶಿಸಿದ್ದಾರೆ.