ಮಂಗಳೂರು: ಅಪ್ರಾಪ್ತ ವಯಸ್ಸಿನ ವಿದ್ಯಾರ್ಥಿನಿಗೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪಿಯನ್ನು ಮಂಗಳೂರು ಮಹಿಳಾ ಠಾಣೆಯ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ಕದ್ರಿಯ ಯಶವಂತ (50) ಎಂದು ಗುರುತಿಸಲಾಗಿದೆ.
ಈತ ಸೆಕ್ಯುರಿಟಿ ಗಾರ್ಡ್ ಆಗಿ ಕೆಲಸ ನಿರ್ವಹಿಸುತ್ತಿದ್ದ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.