ಪುತ್ತೂರು: ತಾಲೂಕಿನ ತಿಂಗಳಾಡಿಯಲ್ಲಿ ಹಿಂದೂ ಯುವತಿಯ ಜೊತೆ ಅನ್ಯಕೋಮಿನ ಯುವಕ ಅಸಭ್ಯವಾಗಿ ವರ್ತಿಸಿದ ಘಟನೆ ನಡೆದಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು, ಆರೋಪಿಗೆ ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ ಎಂದು ತಿಳಿದು ಬಂದಿದೆ.
ಸರ್ವೆ ಸೊರಕೆ ನಿವಾಸಿ ಆದಂ ಎಂಬವರ ಪುತ್ರ ಬದ್ರುದ್ದೀನ್ ಕಿರುಕುಳ ನೀಡಿ ಪರಾರಿಯಾಗಿದ್ದ ಆರೋಪಿ.

ಆರೋಪಿಯನ್ನು ಇಂದು ಮುಂಜಾನೆ ಬಂಧಿಸಿದ ಪೊಲೀಸರು ಬಂಧಿಸಿದ್ದು, ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ. ಇದೀಗ ನ್ಯಾಯಾಲಯವು ಆರೋಪಿಗೆ 15 ದಿನಗಳ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿದೆ.
ಆರೋಪಿಗೆ ನ್ಯಾಯಾಲಯವು 15 ದಿನ ನ್ಯಾಯಾಂಗ ಬಂಧನ ವಿಧಿಸಿದ್ದು, 15 ದಿನಕ್ಕಿಂತ ಮುಂಚೆಯೇ ಆರೋಪಿಗೆ ಜಾಮೀನು ಸಿಗುವ ಸಾಧ್ಯತೆಯೂ ಇದೆ ಎನ್ನಲಾಗುತ್ತಿದೆ.
