ಬೆಳ್ತಂಗಡಿ: ಬೈಕ್‌ಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಯುವಕನೋರ್ವ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೆಳ್ತಂಗಡಿ ಸಮೀಪದ ಅಳದಂಗಡಿ ಬಳಿ ನಡೆದಿದೆ.
ಕುದ್ಯಾಡಿಯ ಪ್ರವೀಣ್ ಆಚಾರ್ಯ ಸ್ಥಳದಲ್ಲೇ ಮೃತಪಟ್ಟ ಯುವಕ.
ಪಿಲ್ಯ ಮಸೀದಿಯ ಬಳಿ ಬೈಕ್ ಗೆ ಲಾರಿ ಡಿಕ್ಕಿ ಹೊಡೆದಿದ್ದು, ನಂತರ ಪರಾರಿಯಾಗಲು ಯತ್ನಿಸಿದ ಲಾರಿ ಚಾಲಕನನ್ನು ಹಿಡಿದು ಸ್ಥಳೀಯರು ಪೊಲೀಸರಿಗೆ ಒಪ್ಪಿಸಿದ್ದಾರೆ.. ಘಟನೆ ಕುರಿತು ವೇಣೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.