ಮಂಗಳೂರು: ಸುರತ್ಕಲ್‌ನ ಫಾಝಿಲ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಯೊಬ್ಬನಿಗೆ ಜಾಮೀನು ಸಿಕ್ಕಿದೆ.
ಹತ್ಯೆ ಪ್ರಕರಣದ ಪ್ರಮುಖ ಆರೋಪಿಗಳಿಗೆ ಆಶ್ರಯ ನೀಡಿದ ಆರೋಪದಲ್ಲಿ ಬಂಧಿತನಾಗಿದ್ದ ಹರ್ಷಿತ್ (28)ನಿಗೆ ಜಾಮೀನು ಲಭಿಸಿದೆ.
ಜು. 28ರಂದು ನಡೆದ ಫಾಝಿಲ್ ಹತ್ಯೆ ಪ್ರಕರಣದಲ್ಲಿ ಪ್ರಮುಖ ಏಳು ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದರು. ಈ ವೇಳೆ ಆರೋಪಿಗಳಿಗೆ ಆಶ್ರಯ ನೀಡಿದ ಆರೋಪದಲ್ಲಿ ಎಂಟನೇ ಆರೋಪಿಯಾಗಿ ಹರ್ಷಿತ್‌ನನ್ನು ಬಂಧಿಸಲಾಗಿತ್ತು. ಬಳಿಕ ಎಲ್ಲ ಆರೋಪಿಗಳು ನ್ಯಾಯಾಂಗ ಬಂಧನದಲ್ಲಿದ್ದರು. ಮಂಗಳೂರಿನ ಮೂರನೇ ಜಿಲ್ಲಾ ಸತ್ರ ನ್ಯಾಯಾಲಯ ಜಾಮೀನು ನೀಡಿದೆ.
