ಬಂಟ್ವಾಳ: ರೈಲು ಡಿಕ್ಕಿಯಾಗಿ ವ್ಯಕ್ತಿಯೋರ್ವ ಮೃತಪಟ್ಟ ಘಟನೆ ಬಂಟ್ವಾಳ ನಗರ ಪೊಲೀಸ್ ಠಾಣೆಯ ಪುರಸಭಾ ವ್ಯಾಪ್ತಿಯ ಮೊಡಂಕಾಪು ಎಂಬಲ್ಲಿ ನಡೆದಿದೆ.
ಮಂಡಾಡಿ ನಿವಾಸಿ ಪ್ರವೀಣ್ ಪೂಜಾರಿ (40) ಮೃತ ವ್ಯಕ್ತಿ.
ಪ್ರವೀಣ್ ರವರು ಕೆಲಕಾಲದಿಂದ ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿದ್ದರು ಎನ್ನಲಾಗಿದ್ದು, ರೈಲ್ವೆ ಹಳಿಯ ಬದಿಯಲ್ಲಿ ನಡೆದುಕೊಂಡು ಹೋಗುತ್ತಿರುವಾಗ ರೈಲು ಡಿಕ್ಕಿ ಹೊಡೆದಿದೆ ಎಂದು ಶಂಕಿಸಲಾಗಿದೆ.
ನಗರ ಠಾಣಾ ಎಸ್.ಐ.ಅವಿನಾಶ್ ಅವರು ಸ್ಥಳಕ್ಕೆ ಭೇಟಿ ನೀಡಿ ವ್ಯಕ್ತಿಯ ಗುರುತು ಪತ್ತೆ ಹಚ್ಚಿ ಬಳಿಕ ರೈಲ್ವೆ ಇಲಾಖೆಗೆ ಮಾಹಿತಿ ನೀಡಿದ್ದಾರೆ ಎಂದು ತಿಳಿದು ಬಂದಿದೆ.