ಪ್ರಧಾನಿ ನರೇಂದ್ರ ಮೋದಿಯವರ 71 ನೇ ವರ್ಷದ ಹುಟ್ಟುಹಬ್ಬದ ಪ್ರಯುಕ್ತ ಬಿ.ಜೆ.ಪಿ ಯುವಮೋರ್ಚ ಗ್ರಾಮಾಂತರ ಮಂಡಲ ಹಾಗೂ ನಗರ ಮಂಡಲದ ನೇತೃತ್ವದಲ್ಲಿ ಬೃಹತ್ ರಕ್ತದಾನ ಶಿಬಿರ ಟೌನ್ ಬ್ಯಾಂಕ್ ಹಾಲ್ ಪುತ್ತೂರಿನಲ್ಲಿ ಸೆಪ್ಟೆಂಬರ್ 17 ರಂದು ಬೆಳಿಗ್ಗೆ ನಡೆಯಲಿದೆ.
ಕಾರ್ಯಕ್ರಮವನ್ನು ಬೆಳಿಗ್ಗೆ 9.30 ಗಂಟೆಗೆ ಉದ್ಘಾಟನೆಯನ್ನು ಪುತ್ತೂರು ವಿಧಾನಸಭಾ ಕ್ಷೇತ್ರದ ಶಾಸಕ ಸಂಜೀವ ಮಠಂದೂರು ನೆರವೇರಿಸಲಿದ್ದು, ಪಕ್ಷದ ಪ್ರಮುಖರು ಉಪಸ್ಥಿತರಿರುತ್ತಾರೆ, ಪಕ್ಷದ ಕಾರ್ಯಕರ್ತರು ಹಾಗೂ ಮೋದಿ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಪುತ್ತೂರು ಗ್ರಾಮಾಂತರ ಮಂಡಲ ಯುವಮೋರ್ಚಾ ಅಧ್ಯಕ್ಷರಾದ ನವೀನ್ ಪಡ್ನೂರು ಹಾಗೂ ನಗರ ಮಂಡಲ ಯುವಮೋರ್ಚ ಅಧ್ಯಕ್ಷ ಸಚಿನ್ ಶೆಣೈ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.