ಪುತ್ತೂರು: ಪ್ರಧಾನಿ ನರೇಂದ್ರ ಮೋದಿಯವರ 72ನೇ ವರ್ಷದ ಹುಟ್ಟುಹಬ್ಬದ ಪ್ರಯುಕ್ತ ಬಿ.ಜೆ.ಪಿ ಯುವಮೋರ್ಚ ಗ್ರಾಮಾಂತರ ಮಂಡಲ ಹಾಗೂ ನಗರ ಮಂಡಲದ ನೇತೃತ್ವದಲ್ಲಿ ಟೌನ್ ಬ್ಯಾಂಕ್ ಹಾಲ್ ನಲ್ಲಿ ಸೆ.17 ರಂದು ಬೆಳಿಗ್ಗೆ ರಕ್ತದಾನ ಶಿಬಿರ ನಡೆಯಿತು.
ಕಾರ್ಯಕ್ರಮವನ್ನು ಶಾಸಕರಾದ ಸಂಜೀವ ಮಠoದೂರು ರವರು ಉದ್ಘಾಟಿಸಿದರು.
ಹಲವಾರು ಮಂದಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು, ರಕ್ತದಾನ ಮಾಡಿದರು. ಈ ಸಂದರ್ಭದಲ್ಲಿ ಪಕ್ಷದ ಪ್ರಮುಖರು, ಕಾರ್ಯಕರ್ತರು ಹಾಗೂ ಮೋದಿ ಅಭಿಮಾನಿಗಳು ಉಪಸ್ಥಿತರಿದ್ದರು.