ಪುತ್ತೂರು: ಮಕ್ಕಳು ಶಿಕ್ಷಣದಿಂದ ವಂಚಿತರಾಗದೆ ಸುಶಿಕ್ಷಿತಾರಾದಾಗ ಸಮಾಜದಲ್ಲಿ ಅಪರಾಧ ಪ್ರಕರಣಗಳು ನಿಯಂತ್ರಣವಾಗುತ್ತದೆ ಎಂದು ಬೆಳ್ಳಾರೆ ಪೊಲೀಸ್ ಠಾಣೆಯ ಠಾಣಾಧಿಕಾರಿ ಸುಹಾಸ್ ಎಸ್ ಹೇಳಿದರು.
ಅವರು ಬೆಳ್ಳಾರೆಯ ಜ್ಞಾನದೀಪ ಇಂಟರಾಕ್ಟ್ ಕ್ಲಬ್ ಆಶ್ರಯದಲ್ಲಿ ಸಂಸ್ಥೆಯಲ್ಲಿ ವಿದ್ಯಾರ್ಥಿಗಳಿಗೆ ಹಾಗೂ ಪೋಷಕರಿಗೆ ನಡೆದ ಬಾಲಾಪರಾಧ ಮತ್ತು ಸೈಬರ್ ಕಾನೂನು ಜಾಗೃತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾಹಿತಿ ನೀಡಿದರು.
ವಿದ್ಯಾರ್ಥಿಗಳು ದುಶ್ಚಟಗಳಿಂದ ದೂರವಿದ್ದು, ಸಾಮಾಜಿಕ ಜಾಲತಾಣಗಳನ್ನು ಎಚ್ಚರಿಕೆಯಿಂದ ಬಳಸಬೇಕು ಎಂದು ಸುಹಾಸ್ ಹೇಳಿದರು.
ಜ್ಞಾನದೀಪ ಇಂಟರಾಕ್ಟ್ ಕ್ಲಬ್ ಅಧ್ಯಕ್ಷ ಚಂದನ್ ಅಧಕ್ಷತೆ ವಹಿಸಿದ್ದರು. ಬೆಳ್ಳಾರೆ ಜೇಸಿಐ ಪೂರ್ವಧ್ಯಕ್ಷ ಜಯರಾಮ ಉಮಿಕ್ಕಳ, ಸಂಸ್ಥೆಯ ಉಪನ್ಯಾಸಕರುಗಳಾದ ಶರತ್ ಕಲ್ಲೋಣಿ, ಚಂದ್ರಶೇಖರ್ ಅಲೆಟ್ಟಿ, ಗೀತಾ ಬಾಲಚಂದ್ರ, ಶೋಭಾ ಶೆಟ್ಟಿ, ಬೃಂದಾ ಉಸ್ಥಿತರಿದ್ದರು. ಸಂಸ್ಥೆಯ ನಿರ್ದೇಶಕ ಉಮೇಶ್ ಮಣಿಕ್ಕಾರ ಪ್ರಸ್ತಾವಿಸಿ ಸ್ವಾಗತಿಸಿದರು. ಉಪನ್ಯಾಸಕ ಗಣೇಶ್ ನಾಯಕ್ ಪುತ್ತೂರು ಕಾರ್ಯಕ್ರಮ ನಿರ್ವಹಿಸಿದರು.