ಕರ್ನಾಟಕ ರಾಜ್ಯ ಸರಕಾರ, ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆ,ಉಪನಿರ್ದೇಶಕರಕಛೇರಿ (ಆಡಳಿತ) ಮಂಗಳೂರು, ಇದರ ಸಹಯೋಗದಲ್ಲಿ ದಿನಾಂಕ 07.09.2022 ರಂದು ಜಿಲ್ಲಾ ಮಟ್ಟದ ಗ್ರಾಮೀಣ ಐ.ಟಿ.ಕ್ವಿಜ್ 2022 ಸ್ಪರ್ಧೆಯು ಮಂಗಳೂರಿನ ಕಪಿತಾನಿಯೋ ಪ್ರೌಢ ಶಾಲೆ, ಪಂಪ್‌ವೆಲ್ ನಲ್ಲಿ ನಡೆಯಿತು.
ಈ ಸ್ಪರ್ಧೆಯಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆ, ತೆಂಕಿಲದ 10ನೇ ತರಗತಿಯ ವಿದ್ಯಾರ್ಥಿ ಅನ್ವಿತ್ ಎನ್, (ಶ್ರೀಪತಿ ಎನ್ ಮತ್ತು ವಿದ್ಯಾಲಕ್ಷ್ಮಿ ದಂಪತಿ ಪುತ್ರ) ಇವರು ಭಾಗವಹಿಸಿ, ವಿಭಾಗೀಯ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆ ತೆಂಕಿಲದ ವಿದ್ಯಾರ್ಥಿ ಅನ್ವಿತ್.ಎನ್ ವಿಜ್ಞಾನ ವಿಚಾರಗೋಷ್ಠಿ ಸ್ಪರ್ಧೆಯಲ್ಲಿ ವಿಭಾಗೀಯ ಮಟ್ಟಕ್ಕೆ ಆಯ್ಕೆ ಕರ್ನಾಟಕ ರಾಜ್ಯ ಸರಕಾರ, ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ, ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ ಡಯಟ್, ಮಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ 2022ನೇ ಸಾಲಿನ ಜಿಲ್ಲಾಮಟ್ಟದ ವಿಜ್ಞಾನವಿಚಾರಗೋಷ್ಠಿ ಸ್ಪರ್ಧೆಯು ನಡೆಯಿತು.
ತೆಂಕಿಲದ ವಿವೇಕಾನಂದ ಆಂಗ್ಲಮಾಧ್ಯಮ ಶಾಲೆಯ ಅನ್ವಿತ್‌ಎನ್, 10ನೇತರಗತಿ (ಶ್ರೀಪತಿ ಎನ್ ಮತ್ತು ವಿದ್ಯಾಲಕ್ಷ್ಮಿ ದಂಪತಿ ಪುತ್ರ) ವಿಜ್ಞಾನ ವಿಚಾರಗೋಷ್ಠಿ ಸ್ಪರ್ಧೆಯಲ್ಲಿ ದ್ವಿತೀಯಸ್ಥಾನ ಪಡೆದು ವಿಭಾಗೀಯ ಮಟ್ಟಕ್ಕೆ ಆಯ್ಕೆಯಾಗಿರುತ್ತಾನೆ ಎಂದು ಶಾಲಾ ಮುಖ್ಯೋಪಾಧ್ಯಾಯರು ತಿಳಿಸಿರುತ್ತಾರೆ.
