ಬೆಂಗಳೂರು: ಏರುತ್ತಿರುವ ಬಿಸಿಲಿನ ಬೇಗೆಯ ನಡುವೆಯೂ ಮಳೆ ಬೀಳುವ ನಿರೀಕ್ಷೆ ಇದ್ದು , ಹವಾಮಾನ ಇಲಾಖೆಯೂ ಇಂದಿನಿಂದ 10ರವರೆಗೆ ರಾಜ್ಯದ ಹಲವೆಡೆ ಮಳೆಯಾಗುವ ಬಗ್ಗೆ ಮುನ್ಸೂಚನೆ ನೀಡಿದೆ. ಏಪ್ರಿಲ್ 6ರಂದು ಮೈಸೂರು, ಹಾಸನ, ಕೊಡಗು, ಚಾಮರಾಜನಗರ, ಚಿಕ್ಕಮಗಳೂರು ಜಿಲ್ಲೆಗಳ ವ್ಯಾಪ್ತಿಯಲ್ಲಿ, ಏಪ್ರಿಲ್ 7ರಂದು ದಕ್ಷಿಣ ಕನ್ನಡ, ಉಡುಪಿ, ಚಾಮರಾಜನಗರ, ಹಾಸನ, ಮೈಸೂರು, ಕೊಡಗು ಭಾಗದಲ್ಲಿ ಮಳೆಯಾಗಲಿದೆ. ಏಪ್ರಿಲ್ 8ರಂದು ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಶಿವಮೊಗ್ಗ, ಮೈಸೂರು, ಕೊಡಗು, ಹಾಸನದಲ್ಲಿ ಮಳೆ ಬೀಳುವ ನಿರೀಕ್ಷೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಏಪ್ರಿಲ್ 9 ಮತ್ತು 10ರಂದು ದ.ಕನ್ನಡ, ಉಡುಪಿ, ಉತ್ತರ ಕನ್ನಡ, ಧಾರವಾಡ, ಕಲಬುರಗಿ, ಬೆಳಗಾವಿ, ಶಿವಮೊಗ್ಗ, ಮೈಸೂರು, ಕೊಡಗು, ರಾಯಚೂರು, ಹಾಸನ, ಚಿಕ್ಕಮಗಳೂರು ವ್ಯಾಪ್ತಿಯಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಏಪ್ರಿಲ್ 7 ರವರೆಗೆ ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಮೂರು ದಿನಗಳ ಕಾಲ ಒಣಹವೆ ಇರಲಿದೆ ಹವಾಮಾನ ಇಲಾಖೆ ತಿಳಿಸಿದೆ.