ಉಳ್ಳಾಲ: ಪಿಯುಸಿ ವಿದ್ಯಾರ್ಥಿಯೊಬ್ಬ ಬಸ್ಸಿನಿಂದ ಬಿದ್ದು ಮೃತಪಟ್ಟ ಘಟನೆಗೆ ಸಂಬಂಧಿಸಿ ಪೊಲೀಸರು ಬಸ್ಸಿನ ಚಾಲಕ ಮತ್ತು ನಿರ್ವಾಹಕ ಇಬ್ಬರನ್ನೂ ಬಂಧಿಸಿದ್ದಾರೆ.
ಬಂಧಿತರನ್ನು ಕುಪ್ಪೆಪದವು ನಿವಾಸಿ ಕಾರ್ತಿಕ್ ಆರ್ ಶೆಟ್ಟಿ (30) ಮತ್ತು ಅಂಬ್ಲಮೊಗರು ನಿವಾಸಿ ಕಂಡಕ್ಟರ್ ದಂಶೀರ್ (30) ಎಂದು ಗುರುತಿಸಲಾಗಿದೆ.
ಸೆ. 7 ರಂದು ಉಳ್ಳಾಲದ ಮಾಸ್ತಿಕಟ್ಟೆಯಿಂದ ಬರುತ್ತಿದ್ದ ಯಶರಾಜ್116) ಎಂಬ ವಿದ್ಯಾರ್ಥಿ ಖಾಸಗಿ ಬಸ್ಸಿನಲ್ಲಿ ಉಳ್ಳಾಲದಿಂದ ಮಂಗಳೂರಿಗೆ ಕಾಲೇಜಿಗೆ ಬರುತ್ತಿದ್ದ ಈ ವೇಳೆ, ಬಸ್ಸಿನಲ್ಲಿ ರಶ್ ಇದ್ದುದರಿಂದ ಎದುರು ಭಾಗದ ಮೆಟ್ಟಿಲಿನಲ್ಲಿ ನೇತಾಡುತ್ತಿದ್ದ ಯಶರಾಜ್ ಪ್ರಯಾಣಿಸುತ್ತಿದ್ದ. ಬಸ್ ಸಾಗುತ್ತಿದ್ದಾಗಲೇ ಉಳ್ಳಾಲದ ನೇತ್ರಾವತಿ ಸೇತುವೆಯ ಬಳಿ
ರಸ್ತೆಗೆ ಎಸೆಯಲ್ಪಟ್ಟು ತಲೆಗೆ ತೀವ್ರ ಗಾಯವಾಗಿದ್ದ ಬಾಲಕ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದ.
ಬಸ್ಸಿನ ಚಾಲಕನ ಅತಿ ಧಾವಂತ ಮತ್ತು ನಿರ್ಲಕ್ಷ್ಯದ ಚಾಲನೆಯಿಂದಾಗಿ ವಿದ್ಯಾರ್ಥಿ ಹೊರಕ್ಕೆಸೆಯಲ್ಪಟ್ಟಿದ್ದು ಈ ಬಗ್ಗೆ ಮೃತ ಹುಡುಗನ ತಾಯಿ ಪೊಲೀಸ್ ದೂರು ನೀಡಿದ್ದರು. ಈ ಹಿನ್ನೆಲೆ ಐಪಿಸಿ ಸೆಕ್ಷನ್ 279, 336, 304 ಅಡಿಯಲ್ಲಿ ಅವರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.