ವಿಟ್ಲ: ಎರಡು ಕಾರುಗಳ ಮತ್ತು ಸ್ಕೂಟರ್ ನಡುವೆ ಡಿಕ್ಕಿ ಸಂಭವಿಸಿದ ಘಟನೆ ಸೆ.20 ರಂದು ಕಬಕದಲ್ಲಿ ನಡೆದಿದೆ.

ಮಂಗಳೂರು ಕಡೆಯಿಂದ ಬರುತ್ತಿದ್ದ ಕಾರು ಮತ್ತು ಪುತ್ತೂರು ಕಡೆಯಿಂದ ಬರುತ್ತಿದ್ದ ಕಾರಿನ ನಡುವೆ ಅಪಘಾತ ಸಂಭವಿಸಿದ್ದು, ಈ ವೇಳೆ ಬದಿಯಿಂದ ಬರುತ್ತಿದ್ದ ಸ್ಕೂಟರ್ ಗೂ ಕಾರು ಡಿಕ್ಕಿಯಾಗಿದ್ದು, ಸ್ಕೂಟರ್ ಸವಾರನಿಗೆ ಸಣ್ಣಪುಟ್ಟಗಾಯಗಳಾಗಿದೆ ಎಂದು ವರದಿಯಾಗಿದೆ.


