ವಿಟ್ಲ: ಭಿನ್ನಕೋಮಿನ ಯುವತಿಯರೊಂದಿಗಿದ್ದ ಅನ್ಯಕೋಮಿನ ಯುವಕನೋರ್ವನನ್ನು ಸಾರ್ವಜನಿಕರು ಹಿಡಿದು ಪೊಲೀಸರಿಗೊಪ್ಪಿಸಿದ ಘಟನೆ ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ಕುಡ್ತಮುಗೇರು ಸಮೀಪದ ಪಡಾರು ಬೊಳ್ಳಾದೆ ಎಂಬಲ್ಲಿ ನಡೆದಿದೆ.

ಬೊಳ್ಪಾದೆ ಸಮೀಪ ಹಿಂದೂ ಮತ್ತು ಕ್ರಿಶ್ಚಿಯನ್ ಯುವತಿಯರೊಂದಿಗೆ ಮುಸ್ಲಿಂ ಯುವಕನೋರ್ವ ಇರುವ ಬಗ್ಗೆ ಮಾಹಿತಿ ಅರಿತ ಸಾರ್ವಜನಿಕರು ಸ್ಥಳಕ್ಕೆ ತೆರಳಿ ಅವರನ್ನು ವಿಚಾರಣೆ ನಡೆಸಿದ್ದು, ಯುವತಿಯರನ್ನು ಯುವಕ ಕೆಲಸ ಕೊಡಿಸುವ ಆಮಿಷವೊಡ್ಡಿ ಕರೆತಂದಿದ್ದಾನೆ ಎನ್ನಲಾಗಿದೆ.
ಅವರೆಲ್ಲರೂ ಕೇರಳ ಮೂಲದವರು ಎನ್ನಲಾಗುತ್ತಿದ್ದು, ಸಾರ್ವಜನಿಕರ ಮಾಹಿತಿ ಮೇರೆಗೆ ಸ್ಥಳಕ್ಕಾಗಮಿಸಿದ ಪೊಲೀಸರು ಅವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ತಿಳಿದು ಬಂದಿದೆ.