ಪುತ್ತೂರು : ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆ (ಸಿಬಿಎಸ್ಇ) ಸಂಸ್ಥೆಯ ನೂತನ ಕಟ್ಟಡವನ್ನು ನೆಹರು ನಗರದಲ್ಲಿರುವ ವಿವೇಕಾನಂದ ಕ್ಯಾಂಪಸ್ನಲ್ಲಿ ನಿರ್ಮಿಸಲಾಗಿದ್ದು, ಇದರ ಉದ್ಘಾಟನಾ ಕಾರ್ಯಕ್ರಮವು ಏ. 8ರ ಗುರುವಾರದಂದು ಸಂಜೆ 5.30ಕ್ಕೆ ಕರ್ನಾಟಕ ರಾಜ್ಯದ ಮಾನ್ಯ ಮುಖ್ಯಮಂತ್ರಿಗಳಾದ ಬಿ. ಎಸ್. ಯಡಿಯೂರಪ್ಪ ಅವರು ಲೋಕಾರ್ಪಣೆಗೊಳಿಸಲಿದ್ದರು. ಕಾರಣಾಂತರಗಳಿಂದ ನೂತನ ಕಟ್ಟಡದ ಲೋಕಾರ್ಪಣೆ ಕಾರ್ಯಕ್ರಮವನ್ನು ಮುಂದೂಡಲಾಗಿದ್ದು ಮುಂದಿನ ದಿನಾಂಕವನ್ನು ನಿಗದಿಪಡಿಸಿ ತಿಳಿಸುವುದಾಗಿ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.