ವಿಟ್ಲ: ಜಲ್ಲಿ ಸಾಗಾಟದ ಟಿಪ್ಪರ್ ಲಾರಿಯೊಂದು ಪಲ್ಟಿಯಾಗಿ ಚಾಲಕನಿಗೆ ಗಾಯವಾದ ಘಟನೆ ಮಾಣಿ ಸಮೀಪದ ಬುಡೋಳಿ ಎಂಬಲ್ಲಿ ನಡೆದಿದೆ.

ಘಟನೆಯಿಂದಾಗಿ ಟಿಪ್ಪರ್ ಚಾಲಕನಿಗೆ ಗಾಯವಾಗಿದ್ದು, ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದಾರೆ.
ಟಿಪ್ಪರ್ ಪಲ್ಟಿಯಾಗಿರುವ ಹಿನ್ನೆಲೆ ರಸ್ತೆಯಲ್ಲೆಲ್ಲಾ ಜಲ್ಲಿಕಲ್ಲುಗಳು ಚೆಲ್ಲಿ ಹೋಗಿದ್ದು, ಅದನ್ನು ತೆರವುಗೊಳಿಸಿದ ಬಳಿಕ ವಾಹನ ಸಂಚಾರ ಆರಂಭಗೊಂಡಿತು. ಹೊಯ್ಸಳ ವಾಹನದಲ್ಲಿ ಗಸ್ತುನಿರತರಾಗಿದ್ದ ಬಂಟ್ವಾಳ ಗ್ರಾಮಾಂತರ ಠಾಣಾ ಪೊಲೀಸರು ಸ್ಥಳಕ್ಕಾಗಮಿಸಿ ಸ್ಥಳೀಯರ ಸಹಕಾರದೊಂದಿಗೆ ವಾಹನಗಳ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು.
