ಪುತ್ತೂರು: ಕಾಂಗ್ರೆಸ್ ಅಧಿನಾಯಕ, ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆಯುತ್ತಿರುವ ಭಾರತ್ ಜೋಡೋ ಯಾತ್ರೆಯ ಕೆಪಿಸಿಸಿ ಸಂಯೋಜಕರಾಗಿ ನ್ಯಾಯವಾದಿ ನೂರುದ್ದೀನ್ ಸಾಲ್ಮರ ರವರನ್ನು, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ರವರು ನೇಮಕಗೊಳಿಸಿದ ಬಗ್ಗೆ, ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮದ್ ರವರು ಆದೇಶವನ್ನು ಹೊರಡಿಸಿರುತ್ತಾರೆ.

ನೂರುದ್ದೀನ್ ಸಾಲ್ಮರ ರವರು ಪುತ್ತೂರಿನಲ್ಲಿ ನ್ಯಾಯವಾದಿ ಹಾಗೂ ನೋಟರಿಯಾಗಿ ಕೆಲಸ ನಿರ್ವಹಿಸುತ್ತಿದ್ದು, ಜಿಲ್ಲೆಯ ಹಾಗೂ ರಾಜ್ಯದ ವಿವಿಧ ಕ್ಷೇತ್ರಗಳಲ್ಲಿ ಕಾರ್ಯನಿರ್ವಹಿಸಿಕೊಂಡು ಬರುತ್ತಿದ್ದಾರೆ.





























